

ಗುಂಡ್ಲುಪೇಟೆ: ಗ್ರಾಮಾಂತರ ಪ್ರದೇಶಗಳ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದ್ದು, ಪಾಲಕರು ಹಾಗೂ ಮಕ್ಕಳು ಇದರ ಸದುಪಯೋಗ ಪಡೆಯಬೇಕೆಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ತಾಲೂಕಿನ ಕಂದೇಗಾಲ ಗ್ರಾಮದಲ್ಲಿ 13 ಲಕ್ಷ ರೂ. ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶಗಳ ಶಾಲೆಗಳಿಗೆ ಉತ್ತಮ ಕೊಠಡಿಗಳನ್ನು ನಿರ್ಮಿಸಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು, ಮಧ್ಯಾಹ್ನದ ಬಿಸಿಯೂಟದಲ್ಲಿ ಪೌಷ್ಟಿಕ ಆಹಾರ, ಸಮವಸ್ತ್ರ, ಬ್ಯಾಗ್, ಶೂ ಸೇರಿದಂತೆ ಅಗತ್ಯ ಕಲಿಕಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆಯಾಗದಂತೆ ಗುಣಮಟ್ಟದ ಶಿಕ್ಷಣ ಕೊಡಲು ರಾಜ್ಯ ಸರ್ಕಾರ ಬದ್ಧವಾಗಿವೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಕಗ್ಗಳದಹುಂಡಿ ಮಾದಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಾಜಿ ಸದಸ್ಯ ಕೆಂಪರಾಜು, ಮುಖಂಡರಾದ ಎಂ.ಎನ್.ಬಸವರಾಜು, ಕುಮಾರ್, ಮಾದೇಶ್ ಸೇರಿದಂತೆ ಇತರರು ಇದ್ದರು.
ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಕೆ.ಎಸ್.ಮಹೇಶ್, ಕೆಂಪರಾಜು, ಬಸವರಾಜು, ಮಾದಪ್ಪ ಇದ್ದರು.