ವಿಕಲಚೇತನರ ಕಲ್ಯಾಣಕ್ಕೆ ಸರ್ಕಾರ ಬದ್ಧ

mdg 1 (15)
Published on

ಮೂಡಿಗೆರೆ: ವಿಕಲಚೇತನರು ಜೀವನ ನಡೆಸಲು ಧೃತಿಗೆಡುವ ಅವಶ್ಯಕತೆಯಿಲ್ಲ. ಪ್ರತಿಯೊಬ್ಬ ವಿಶೇಷ ಚೇತನರನ್ನು ಹುಡುಕಿ ಅವರಿಗೆ ಮೂಲಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ತಾಪಂ ಕಚೇರಿ ಆವರಣದಲ್ಲಿ ವಿಕಲಚೇತನರ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಶಾಸಕರ ನಿಧಿ ಬಳಸಿ ಖರೀದಿಸಿರುವ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ವರ್ಷ ಅಂಗವಿಕಲರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ನಾನು ಶಾಸಕಿಯಾಗಿ ಅಧಿಕಾರಕ್ಕೆ ಬರುವ ಮುನ್ನವೆ ಕ್ಷೇತ್ರದಲ್ಲಿ ತಿರುಗಾಡುವಾಗ ಅನೇಕ ಮಂದಿ ವಿಕಲಚೇತನರ ಸಮಸ್ಯೆ ಆಲಿಸಿದ್ದು, ಸರ್ಕಾರ ನೀಡುವ ಸವಲತ್ತುಗಳ ಜತೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು ವಿಕಲಚೇತನರ ಅಭಿವೃದ್ಧಿಗೆ ವಿನಿಯೋಗಿಸಲಾಗಿದೆ. ಸರ್ಕಾರದ ಅನೇಕ ಸೌಲಭ್ಯಗಳ ಭಗ್ಗೆ ಫಲಾನುಭವಿಗಳಿಗೆ ಸೌಲಭ್ಯದ ಬಗ್ಗೆ ಮಾಹಿತಿ ಇರುವುದಿಲ್ಲ. ಸೌಲಭ್ಯದಿಂದ ವಂಚಿತರಾದ ಅರ್ಹ ಫಲಾನುಭವಿಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸರ್ಕಾರದ ಸೌಲಭ್ಯ ಪ್ರತಿಯೊಬ್ಬರನ್ನು ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಶಾಸಕರ ಅನುದಾನದಲ್ಲಿ 8 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಹಾಗೂ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ಗಾಲಿ ಕುರ್ಚಿ, ಕಿವಿ ಯಂತ್ರ, ಊರುಗೋಲುಗಳನ್ನು ವಿತರಿಸಿದರು. ಪಪಂ ಉಪಾಧ್ಯಕ್ಷ ಹೊಸಕೆರೆ ರಮೇಶ್, ತಾಪಂ ಇಒ ದಯಾವತಿ, ಜಿಲ್ಲಾ ವಿಕಲಚೇತನ ಕಲ್ಯಾಣ ಇಲಾಖೆ ಅಧಿಕಾರಿ ವೀರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net