ಮೀನುಗಾರರ ಕಲ್ಯಾಣಕ್ಕೆ ಸರ್ಕಾರ ಬದ್ಧ; ಮಂಜುನಾಥ ಸುಣಗಾರ

CONGRESS MEENUGAR SASBHE
ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಮೀನುಗಾರರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಮಾತನಾಡಿದರು. ರಾಜು ಆಲಗೂರ, ಗಂಗಾಧರ ಸಂಬಣ್ಣಿ, ಸುಭಾಷ ಕಾಲೇಭಾಗ ಮತ್ತಿತರರಿದ್ದಾರೆ.
Published on

ವಿಜಯಪುರ: ಮೀನುಗಾರರ ಕಲ್ಯಾಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು ಅರ್ಹಫಲಾನುಭವಿಗಳಿಗೆ ತಲುಪಿಸಲು ಶ್ರಮಿಸಬೇಕೆಂದು ಕೆಪಿಸಿಸಿ ಮೀನುಗಾರರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣಗಾರ ಕಾರ್ಯಕರ್ತರಿಗೆ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಲಕಸಬುಗಳಿಗೆ ಕಾಂಗ್ರೆಸ್ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದೆ. ಅದೇ ರೀತಿ ಮೀನುಗಾರರಿಗೆ ಸಹಾಯಧನ, ಸಲಕರಣೆ ವಿತರಣೆ, ಶೈಕ್ಷಣಿಕ ಸೌಲಭ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅಪಾರ ಅನುದಾನ ಮೀಸಲಿರಿಸಿದೆ ಎಂದರು.

ಗ್ಯಾರಂಟಿ ಯೋಜನೆಗಳಿಂದಾಗಿ ಈಗಾಗಲೇ ಜನಮನ ಗೆದ್ದಿರುವ ಸಿದ್ದರಾಮಯ್ಯ ಸರ್ಕಾರ ಅದರ ಹೊರತಾಗಿಯೂ ಅನೇಕ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೂ, ಪ್ರತಿಪಕ್ಷಗಳು ವೃಥಾ ಆರೋಪದಲ್ಲಿ ತೊಡಗಿದ್ದು, ಅದಕ್ಕೆ ದಿಟ್ಟ ಉತ್ತರ ನೀಡುವ ಕೆಲಸ ಕಾರ್ಯಕರ್ತರಿಂದಾಗಬೇಕೆಂದರು.

ಕೇಂದ್ರ ಬಿಜೆಪಿ ಸರ್ಕಾರದ ಮತ ಕಳ್ಳತನದ ನೀತಿ ವಿರುದ್ಧ ಸಹಿ ಸಂಗ್ರಹಣೆ ಮಾಡಲಾಯಿತು. ಮಾಜಿ ಶಾಸಕ ರಾಜು ಆಲಗೂರ, ಡಿಸಿಸಿ ಉಪಾಧ್ಯಕ್ಷ ಗಂಗಾಧರ ಸಂಬಣ್ಣಿ, ಸುಭಾಷ ಕಾಲೇಭಾಗ, ಕೃಷ್ಣ ಕಾಮಟೆ, ಸಾಹೇಬಗೌಡ ಬಿರಾದಾರ, ರಮೇಶ ಗುಬ್ಬೇವಾಡ, ಯಾಕೂಬ ನಾಟೀಕಾರ, ಪರಮಾನಂದ ಕೋಳಿ, ವಸಂತ ಹೊನಮೊಡೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net