ಭಯೋತ್ಪಾದಕರ ದಾಳಿಗೆ ಖಂಡನೆ

mdg 2
Published on

ಮೂಡಿಗೆರೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಲಯನ್ಸ್ ವೃತ್ತದಲ್ಲಿ ರಾತ್ರಿ ಪ್ರತಿಭಟನೆ ನಡೆಸಲಾಯಿತು.

ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಶಂಕರ್ ಮಾತನಾಡಿ, ದೇಶಕ್ಕೆ ಗಂಡಾಂತರ ಎದುರಾದಾಗ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವವರು ಎಚ್ಚೆತ್ತುಕೊಳ್ಳಬೇಕು. ಈಗಿನ ಕೇಂದ್ರ ಸರ್ಕಾರ ಏನು ಆಗಿಲ್ಲ ಎಂದು ವರ್ತಿಸುತ್ತಿದೆ. ಕೇಂದ್ರ ಸರ್ಕಾರದ 11ವರ್ಷದ ಆಡಳಿತದಲ್ಲಿ ಹಲವಾರು ಬಾರಿ ದೇಶದ ಮೇಲೆ ದಾಳಿ ನಡೆದಿದೆ. ಇಂತಹ ಘಟನೆ ಮರುಕಳಿಸದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ವಹಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯವೇ ದಾಳಿಗೆ ಪ್ರಮುಖ ಕಾರಣ. ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕುನ್ನಳಿ ರವಿ, ಕಸಬಾ ಹೋಬಳಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕೊಬ್, ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡದ ವಿಭಾಗದ ಅಧ್ಯಕ್ಷ ಹರೀಶ್, ಹಿಂದುಳಿದ ವರ್ಗದ ಅಧ್ಯಕ್ಷ ಷಣ್ಮುಖಾನಂದ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಅಹಮದ್ ಬಾವ, ಯುವ ಕಾಂಗ್ರೆಸ್ ಅಧ್ಯಕ್ಷ ಇಮ್ರಾನ್, ಅನಿಲ್, ಆಶಿಕ್, ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net