ಕೊಟ್ಟೂರು: ಕರ್ನಾಟಕ ಪೌರಕಾರ್ಮಿಕರ ಸಂಘ ಮೇ 27ರಂದು ಅನಿರ್ದಿಷ್ಟ ಮುಷ್ಕರ ಹೂಡುವುದಾಗಿ ಪಪಂ ಮುಖ್ಯಾಧಿಕಾರಿ ನಸರುಲ್ಲಾ ಅವರಿಗೆ ಮನವಿ ಸಲ್ಲಿಸಿತು.
ಇದನ್ನೂ ಓದಿ: ಕೆಲಸ ಸ್ಥಗಿತಗೊಳಿಸಿದ ಪೌರಕಾರ್ಮಿಕರು
ಅಧ್ಯಕ್ಷ ಎಂ.ಕೊಟ್ರೇಶ ಮಾತನಾಡಿ, ರಾಜ್ಯ ಸಂಘದ ಸೂಚನೆ ಮೇರೆಗೆ ಕೊಟ್ಟೂರು ಪೌರಕಾರ್ಮಿಕರ ಸಂಘ ಅನಿರ್ದಿಷ್ಟ ಮುಷ್ಕರಕ್ಕೆ ಮುಂದಾಗಿದೆ. ಪಪಂ. ಪುರಸಭೆ. ನಗರಸಭೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೆಜಿಐಡಿ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಬೇಕು. ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂಬುದು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.