ವಿಎಗಳ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ಬೆಂಬಲ

strike
Published on

ಲಕ್ಷ್ಮೇಶ್ವರ: ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಗುರುವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಸಂಘದ ತಾಲೂಕಾಧ್ಯಕ್ಷ ಜಿ.ಡಿ. ಹವಳದ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಎಸ್. ಹರ್ಲಾಪೂರ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಹಿಂದೆ ಕೈಗೊಂಡ ಮುಷ್ಕ್ಕರದ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಕಾರಣ ಮತ್ತೆ ಗ್ರಾಮ ಮುಷ್ಕರಕ್ಕೆ ಇಳಿದಿದ್ದಾರೆ. ಇದರಿಂದ ಸಾರ್ವಜನಿಕರ ಕೆಲಸಗಳ ಮೇಲೆ ಸಮಸ್ಯೆ ಉಂಟಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯ ಬೇಕು. ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್ ಕುರ್ಚಿ ಅಲ್ಮೆರಾ, ಮೊಬೈಲ್ ಸಿಯುಜಿ ಸಿಮ್ ಮತ್ತು ಡೇಟಾ, ಲ್ಯಾಪ್‌ಟಾಪ್, ಪ್ರಿಂಟರ್ ಸ್ಕ್ಯಾನರ್, ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಬೇಕು ಎಂಬ ಬೇಡಿಕೆಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಹೋರಾಟಕ್ಕೆ ನೈತಿಕವಾಗಿ ಧೈರ್ಯ ತುಂಬುವ ನಿಟ್ಟಿನಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎ. ನದಾಫ, ಮಂಜುನಾಥ ವಾರದ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಫ್.ಎಸ್. ತಳವಾರ, ಆರ್‌ಡಿಪಿಆರ್ ನೌಕರರ ಸಂಘದ ಅಧ್ಯಕ್ಷ ಕೃಷ್ಣಪ್ಪ ಧರ್ಮರ, ವಿಕಲಚೇತನ ನೌಕರರ ಸಂಘದ ಅಧ್ಯಕ್ಷ ಬಿ.ಎಂ. ಕುಂಬಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ಚೌಹಾಣ ಎಂ.ಬಿ. ಹೂಗಾರ, ಎ.ಎಂ. ಅಕ್ಕಿ, ಶ್ರೀಕಾಂತ ಬಾಲೆಹೊಸೂರ, ಮಂಜುನಾಥ ಕೊಕ್ಕರಗುಂದಿ ಹಾಜರಿದ್ದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘ ತಾಲೂಕಾಧ್ಯಕ್ಷ ಡಿ.ಎಸ್. ಕುಲಕರ್ಣಿ, ಉಪಾಧ್ಯಕ್ಷ ಎಚ್.ಕೃಷ್ಣಮೂರ್ತಿ, ಬಿ.ವೈ. ಮಲ್ಲಿಗವಾಡ, ಎನ್.ಬಿ. ಕನೋಜ, ಸುಬೇದಖಾನ ಪಠಾಣ, ಡಿ.ಎಲ್. ವಿಭೂತಿ, ಆರ್.ಎನ್. ನೆಗಳೂರ, ಫಾತಿಮಾ ಪತ್ತೆಖಾನ, ಸೌಮ್ಯಾ ಕೆ., ಕೆ.ಎನ್. ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net