ಗೌರವಯುವ ಸ್ಥಾನ ನೀಡುವಲ್ಲಿ ಸರ್ಕಾರ ವಿಫಲ

ಗೌರವಯುವ ಸ್ಥಾನ ನೀಡುವಲ್ಲಿ ಸರ್ಕಾರ ವಿಫಲ
Published on

ಮಳವಳ್ಳಿ: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರ ಗೌರವಯುತ ಹುದ್ದೆ ನೀಡುವಲ್ಲಿ ವಿಫಲವಾಗಿದೆ ಎಂದು ದಲಿತ ಮುಖಂಡ ಬೆಳಕವಾಡಿ ಕಾಂತರಾಜು ಆರೋಪಿಸಿದರು.

ಪಟ್ಟಣದ ತಾಲೂಕು ಕಚೇರಿಗೆ ಶನಿವಾರ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು ತೆರಳಿ ಸಮುದಾಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಕೊಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಎಸ್ಸಿ, ಎಸ್ಟಿ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ಅಹಿಂದ ನಾಯಕ ಎನಿಸಿಕೊಳ್ಳುವ ಸಿದ್ದರಾಮಯ್ಯ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ದಲಿತ ಜನಪ್ರತಿನಿಧಿಗಳು ಕೂಡಲೇ ಸರ್ಕಾರದ ಗಮನ ಸೆಳೆಯುವ ಮೂಲಕ ಸಮುದಾಯದ ಅಧಿಕಾರಿಗಳಿಗೆ ಉನ್ನತ ಮಟ್ಟದ ಹುದ್ದೆಯನ್ನು ನೀಡಬೇಕೆಂದರು.

ಪ್ರಮುಖರಾದ ಸುರೇಶ್, ಬಿಎಸ್‌ಪಿ ತಾಲೂಕು ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿದರು. ಮಲ್ಲಣ್ಣ, ಕೆಂಪರಾಜು, ಮಲ್ಲಿಕಾರ್ಜುನ, ನಾಗರಾಜು, ಮಲ್ಲೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net