ಸರ್ಕಾರದ ಮಾರ್ಗಸೂಚಿ ಪಾಲಿಸಿ

2blrp1
Published on

ಬೇಲೂರು: ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ತಹಸೀಲ್ದಾರ್ ನಟೇಶ್ ಹೇಳಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ವರ್ತಕರು, ಹೋಟೆಲ್ ಹಾಗೂ ಪಾನಿಪೂರಿ ಮತ್ತು ತರಕಾರಿ, ಮೀನು ಮಾಂಸ ಮಾರಾಟಗಾರರ ಸಭೆಯಲ್ಲಿ ಮಾತನಾಡಿ, ಸವಿತಾ ಸಮಾಜದ ಜನರು ಪಿಪಿಇ ಹೆಲ್ಮೆಟ್‌ಗಳನ್ನು ಬಳಸಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಹೋಟೆಲ್, ಮೀನು ಸೇರಿ ಮಾಂಸ ಮಾರಾಟದ ಅಂಗಡಿಗಳಲ್ಲಿ ಸ್ವಚ್ಛತೆಯೊಂದಿಗೆ ಪರಸ್ಪರ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಅಂಗಡಿ ಮುಂದೆ ಮಾರ್ಕ್ ಹಾಕಬೇಕು. ತಪ್ಪಿದರೆ ಸೀಲ್‌ಡೌನ್ ಮಾಡಲಾಗುವುದು ಎಂದರು.

ವರ್ತಕರ ಸಂಘದ ಅಧ್ಯಕ್ಷ ಗಿರಿಯಪ್ಪಶೆಟ್ಟಿ, ಕಾರ್ಯದರ್ಶಿ ಮಹಮದ್‌ಅಶ್ವಾಕ್, ಕಸಾಪ ಅಧ್ಯಕ್ಷ ದಯಾನಂದ್, ಹೊಯ್ಸಳ ಐಡಿಎಸ್‌ಎಂಟಿ ಮಾರುಕಟ್ಟೆ ಅಧ್ಯಕ್ಷ ರಾಜು, ಸವಿತಾ ಸಮಾಜ ಸಂಘದ ಅಧ್ಯಕ್ಷ ನರಸಿಂಹ, ಉದ್ಯಮಿ ಸಂತೋಷ್, ವರ್ತಕರ ಸಂಘದ ತೀರ್ಥಂಕರ್, ವಾಸುದೇವ ಧನ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net