ಹನೂರಿನ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ

R NARENDRA
Published on

ಹನೂರು: ಹನೂರಿನ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಭೆಗೂ ಮುನ್ನ ಹನೂರಿನ ಆಸ್ಪತ್ರೆಯನ್ನು 100 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಲಾಗಿತ್ತು. ಇದೀಗ ಸರ್ಕಾರದಿಂದ 50 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಬಗ್ಗೆ ತಿಳಿದು ಹನೂರು ಕ್ಷೇತ್ರ ಜಿಲ್ಲೆಯಲ್ಲಿಯೇ ಹೆಚ್ಚು ವಿರ್ಸ್ತೀಣವನ್ನು ಹೊಂದಿದೆ. ಹಾಗಾಗಿ 100 ಹಾಸಿಗೆಯ ಆಸ್ಪತ್ರೆ ಅಗತ್ಯವಿದೆ ಎಂಬುದಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಲ್ಲಿ ಮನವರಿಕೆ ಮಾಡಿಕೊಡಲಾಗಿದ್ದು, ಸದ್ಯಕ್ಕೆ 50 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿ. ಮುಂದಿನ ದಿನಗಳಲ್ಲಿ ಇನ್ನುಳಿದ 50 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ನು 20 ಕೋಟಿ ರೂ. ಅನುದಾನವನ್ನು ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ಯಾರಂಟಿ ಯೋಜನೆಯಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ, ಪಪಂ ಸದಸ್ಯ ಗಿರೀಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಾಜು ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net