

ಬೆಂಗಳೂರು: ಸಂವಿಧಾನದ ಆಶಯಗಳನ್ನು ಈಡೇರಿಸುವ ಸಲುವಾಗಿ ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಮೂಲಕ ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ನಿಡುಮಾಮಿಡಿ ಶೀ ಪೀಠಾರೋಹಣ 33 ಸಮಾರಂಭ ಮತ್ತು "ಹೋರಾಟಕ್ಕೆ ಸಾವಿಲ್ಲ', "ಓಲೆ ಒಳದನಿ' ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ "ಹೋರಾಟಕ್ಕೆ ಸಾವಿಲ್ಲ' ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದರು.
ಚಿಕ್ಕಬಳ್ಳಾಪುರದ ನಿಡುಮಾಮಿಡಿ ಮಠವು ಯಾವುದೇ ಜಾತಿ, ಧರ್ಮ, ಸಂಸತಿಗಳಿಗೆ ಮೀಸಲಾಗದೆ, ಜಾತ್ಯಾತಿತವಾದ ಮಾನವ ಧರ್ಮ ಪೀಠ ಎನಿಸಿದೆ. ಶೀ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಣ ಸಂಸ್ಥೆಗಳು ನಡೆಯುತ್ತವೆ. ಸ್ವಾಮೀಜಿಗಳು ನಿರ್ಭೀತಿಯಿಂದ ಜಾತ್ಯಾತಿತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಸಮಾಜದಲ್ಲಿರುವ ಜಾತೀಯತೆ, ಅಸಮಾನತೆಗಳು ತೊಲಗಿದಾಗ ಮಾತ್ರ ಸಮಾಜ ಪರಿವರ್ತನೆಯತ್ತ ಸಾಗುತ್ತದೆ. ಆದರೆ ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಮನುಷ್ಯತ್ವವೇ ಅಂತಿಮ ಗುರಿಯಾಗಬೇಕು. ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯದ ಪ್ರಜಾಪ್ರಭುತ್ವ ಇರಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದ ವರ್ಗಕ್ಕೆ ಆರ್ಥಿಕ, ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಮುಂದುವರಿಯುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ಕಲಬುರಗಿ ಸಾರಂಗಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಶರಣ ಸಂಸತಿ ಚಿಂತಕ ರಂಜಾನ್ ದರ್ಗಾ ಮತ್ತಿತರರಿದ್ದರು.