

ಚಿಕ್ಕಬಳ್ಳಾಪುರ: ಒಳಮೀಸಲು ಜಾರಿಗೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು ಇದಕ್ಕೆ ಬಲಗೈ ಸಮುದಾಯದ ವಿರೋಧವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದಲ್ಲಿ ಕೈಗೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಒಳಮೀಸಲು ಜಾರಿಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸ್ಪಷ್ಟತೆ ಇದೆ. ಆದರೆ, ಅನುಷ್ಠಾನಕ್ಕೆ ವೈಜ್ಞಾನಿಕ ದತ್ತಾಂಶ ಬೇಕಿದ್ದು ಇದಕ್ಕೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದ ಸಮಿತಿಯು ಸಮರೋಪಾದಿಯ ಅಧ್ಯಯನದಲ್ಲಿ ತೊಡಗಿದೆ. ಇದರ ವರದಿ ಬಂದ ಕೂಡಲೇ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಒಳ ಮೀಸಲಾತಿ ಜಾರಿ ವಿಚಾರವಾಗಿ ಮುಖ್ಯಮಂತ್ರಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್‌ರೊಂದಿಗೆ ಚರ್ಚಿಸಲಾಗಿದೆ. ಕಳೆದ ೩೦ ವರ್ಷಗಳಿಂದಲೂ ವಿಶೇಷ ಸೌಲಭ್ಯಕ್ಕಾಗಿ ದಲಿತ ಪರ ಸಂಘಟನೆಗಳು ಹೋರಾಟ ನಡೆಸಿಕೊಂಡು ಬರುತ್ತಿವೆ. ಇದರ ಫಲ ತ್ವರಿತವಾಗಿ ಸಿಗಲಿದೆ ಎಂದು ತಿಳಿಸಿದ್ದಾರೆ. .
ಎಸ್‌ಸಿ.ಎಸ್‌ಪಿ, ಟಿಎಸ್‌ಪಿ ಅನುದಾನದ ದುಬರ್ಳಕೆ ಮಾಡಿಕೊಳ್ಳುತ್ತಿಲ್ಲ. ದಲಿತರ ಹಿತಕ್ಕಾಗಿ ಮಾತ್ರವೇ ಬಳಸಲಾಗುತ್ತಿದೆ. ಇದರಿಂದ ಆರೋಪಗಳಿಗೆ ಬೆಲೆ ನೀಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.