ಸರ್ಕಾರ ನೂತನ ಕೃಷಿ ಕಾಯ್ದೆಗಳ ಹಿಂಪಡೆಯಲು ಬಳ್ಳಾರಿಯಲ್ಲಿ ರೈತರಿಂದ ಟ್ರ್ಯಾಕ್ಟರ್, ಎತ್ತಿನಬಂಡಿ ರ‌್ಯಾಲಿ

Ballari Farmers Rally on New Agriculture Act
ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಳ್ಳಾರಿಯಲ್ಲಿ ವಿವಿಧ ರೈತ ಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
Published on

ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶನಿವಾರ ರೈತ ಪರ ಸಂಘಟನೆಗಳಿಂದ ನಗರದಲ್ಲಿ ಟ್ರ್ಯಾಕ್ಟರ್ ಹಾಗೂ ಎತ್ತಿನಬಂಡಿ ರ‌್ಯಾಲಿ ನಡೆಸಲಾಯಿತು.

ನಗರದ ಇಂದಿರಾಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನೂರಾರು ರೈತರು ಟ್ರ್ಯಾಕ್ಟರ್ ಹಾಗೂ ಎತ್ತಿನಬಂಡಿ ರ‌್ಯಾಲಿ ನಡೆಸಿದರು. ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜಾರಿಗೆ ತಂದಿರುವ ಕಾನೂನುಗಳು ಬಹುರಾಷ್ಟ್ರೀಯ ಕಂಪನಿಗಳ ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಶಕ್ತಿಗಳ ಹಿತ್ತಕ್ಕಾಗಿಯೇ ಹೊರತು ಜನಸಾಮಾನ್ಯರಿಗಾಗಿ ಅಲ್ಲ. ಆದ್ದರಿಂದ ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿವಿಧ ರೈತ ಪರ ಸಂಘಟನೆಗಳ ಮುಖಂಡರಾದ ಆರ್.ಮಾಧವ್ ರೆಡ್ಡಿ, ಸಿ.ಮಲ್ಲಿಕಾರ್ಜನ, ಹಳ್ಳಪ್ಪ, ತಿಮ್ಮನಗೌಡ, ಲೇಪಾಕ್ಷಿ ಅಸುಂಡಿ, ಗೋವಿಂದಪ್ಪ, ಬಿ.ಗಂಗಾಧರ, ರಾಜಶೇಖರ್, ಮಂಜುನಾಥ ಆಚಾರಿ, ಬಿ.ದೊಡ್ಡನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net