ಸರ್ಕಾರಗಳ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

11 Ylb 04
ಯಲಬುರ್ಗಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸರಸ್ವತಿ ಪೂಜೆ, ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಉದ್ಘಾಟಿಸಿದರು. ಸಿಪಿಐ ಬಾಳನಗೌಡ ಮಾನಶೆಟ್ಟರ್, ಸಿಡಿಸಿ ಉಪಾಧ್ಯಕ್ಷ ಸಿದ್ದನಗೌಡ ಬನ್ನಪ್ಪಗೌಡ್ರ, ಹಂಪಯ್ಯಸ್ವಾಮಿ ಹಿರೇಮಠ, ಪ್ರಾಚಾರ್ಯ ಶರಣಪ್ಪ ಬೇಲೇರಿ ಇದ್ದರು.
Published on

ಯಲಬುರ್ಗಾ: ಪ್ರತಿಯೊಬ್ಬ ವಿದ್ಯಾರ್ಥಿ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸರಸ್ವತಿ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.

ನಿರಂತರ ಅಧ್ಯಯನದಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಸರ್ಕಾರಗಳು ಶೈಕ್ಷಣಿಕ ಸುಧಾರಣೆಗಾಗಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಶಾಸಕ ರಾಯರಡ್ಡಿ ಕ್ಷೇತ್ರದಲ್ಲಿ ಎಲ್‌ಕೆಜಿಯಿಂದ ಪಿಜಿವರೆಗೆ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ಸಿಪಿಐ ಬಾಳನಗೌಡ ಮಾನಶೆಟ್ಟರ್ ಮಾತನಾಡಿ, ಗ್ರಾಮೀಣ ಮಟ್ಟದ ಕನ್ನಡ ಶಾಲೆಯಲ್ಲಿ ಅಭ್ಯಾಸ ಮಾಡಿದವರೇ ಇಂದು ಉನ್ನತ ಸ್ಥಾನಮಾನಗಳಲ್ಲಿ ಇದ್ದಾರೆ. ಅಂಥವರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದರು.

ಸಿಡಿಸಿ ಉಪಾಧ್ಯಕ್ಷ ಸಿದ್ದನಗೌಡ ಬನ್ನಪ್ಪಗೌಡ್ರ, ಪತ್ರಕರ್ತ ಶಿವಮೂರ್ತಿ ಇಟಗಿ, ಚಿಕ್ಕಮ್ಯಾಗೇರಿ ಸಪಪೂ ಕಾಲೇಜು ಸಿಡಿಸಿ ಉಪಾಧ್ಯಕ್ಷ ಹಂಪಯ್ಯಸ್ವಾಮಿ ಹಿರೇಮಠ, ಪ್ರಾಚಾರ್ಯ ಶರಣಪ್ಪ ಬೇಲೇರಿ, ಸಿಡಿಸಿ ಸದಸ್ಯರಾದ ಚಂದ್ರಪ್ಪ ದೊಡ್ಮನಿ, ಭಾಗೀರಥಿ ಜೋಗಿನ್, ಮುಖ್ಯಶಿಕ್ಷಕ ಎಚ್.ದುರುಗಪ್ಪ, ಉಪನ್ಯಾಸಕರಾದ ಶಿವಪ್ಪ ಬೇಲೇರಿ, ಶರಣಪ್ಪ ಉಳ್ಳಾಗಡ್ಡಿ, ಬೀರಪ್ಪ ಕುರಿ, ಬಾಳಪ್ಪ ಹಡಪದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net