ರಾಜಕೀಯವಾಗಿ ಸಿ.ಟಿ. ರವಿಯನ್ನು ಮುಗಿಸಲು ಸರ್ಕಾರ ಸಂಚು : ಪ್ರತಾಪ್ ಸಿಂಹ ಆಕ್ರೋಶ

Pratap
Published on

ಮೈಸೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಧ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸ್ಪೀಕರ್ ಆದೇಶಿಸಬೇಕು. ಆದರೆ, ಸರ್ಕಾರ ತನಿಖೆಗೆ ಆದೇಶಿರುವುದು ಸರಿಯಲ್ಲ. ಸಿ.ಟಿ. ರವಿ ಅವರನ್ನು ರಾಜಕೀಯವಾಗಿ ಮುಗಿಸಿಬಿಡಬೇಕು ಎಂದು ಸರ್ಕಾರ ಹೊರಟಂತೆ ಕಾಣುತ್ತಿದೆ. ಘಟನೆ ಕುರಿತು ಸ್ಪೀಕರ್ ತೀರ್ಮಾನ ಕೈಗೊಳ್ಳುವಂತೆ ಆಗಬೇಕು. ಆದರೆ, ಸರ್ಕಾರ ಕೈಗೊಂಡಿರುವ ತೀರ್ಮಾನ ರಾಜ್ಯದಲ್ಲಿ ಕೆಟ್ಟ ರಾಜಕಾರಣದ ಪರಂಪರೆಗೆ ದಾರಿ ಮಾಡಿಕೊಡುತ್ತದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅವಾಚ್ಯಶಬ್ದ ಬಳಸಿರುವುದು ನಿಜವೇ ಆಗಿದ್ದರೆ ಲಕ್ಷ್ಮೀ ಹೆಬ್ಬಾಳ್ಕರ್ ನ್ಯಾಯ ಕೇಳುವು ದರಲ್ಲಿ ತಪ್ಪೇನು ಇಲ್ಲ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವುದರಲ್ಲಿ ತಪ್ಪೇನು ಇಲ್ಲ. ಆದರೆ, ಅವರು ಈ ವಿಚಾರವಾಗಿ ಸ್ಪೀಕರ್ ಅವರ ಬಳಿ ನ್ಯಾಯ ಕೇಳುವುದು ಸೂಕ್ತ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net