

ಸೋಮವಾರಪೇಟೆ: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಬಿಇಒ ಭಾಗ್ಯಮ್ಮ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ. ಪಾಲಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಣ ನೀಡಲಾಗುತ್ತಿದೆ. ಶಾಲೆ ಅಭಿವೃದ್ಧಿ ವಿವಾರದಲ್ಲಿ ಶಿಕ್ಷಕರು, ಪಾಲಕರು, ದಾನಿಗಳು ಹಾಗೂ ಸಾರ್ವಜನಿಕರ ಕೊಡುಗೆ ಅಪಾರವಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಿ.ಕೆ.ದಿನೇಶ್ ವಹಿಸಿದ್ದರು. ವೇದಿಕೆಲ್ಲಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿ.ಎಂ.ಹೇಮಂತ್, ಚೌಡ್ಲು ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಜೂನಿಯರ್ ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ಐಗೂರು ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಉಮೇಶ್, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಹೇಮಲತಾ, ಪಾಲಕರ ಸಮಿತಿ ಅಧ್ಯಕ್ಷ ಅಯ್ಯಪ್ಪ, ಎನ್.ಜಿ.ಒ.ರೋಹಿತ್, ಸಹ ಶಿಕ್ಷಕಿಯರಾದ ಕೆ.ಟಿ.ಚಂದ್ರಕಲಾ, ಡಿ.ಎನ್.ಯಶೋದಾ, ರಾಧಾ, ಸವಿತಾ, ಅಭಿದಾಬಾನು, ನಾಗೇಶ್ ಇದ್ದರು.