ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ

16 HANUR 5
Published on

ಹನೂರು: ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದರ ಜತೆಗೆ ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಿಕ್ಷಣ ಸಂಯೋಜಕ ಚಿನ್ನಪ್ಪಯ್ಯ ತಿಳಿಸಿದರು.

ಶೈಕ್ಷಣಿಕ ವಲಯದ ಉದ್ದನೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರ ಜತೆಗೆ ಹಲವು ಸವಲತ್ತುಗಳನ್ನು ನೀಡುತ್ತಿದೆ. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಶಿಕ್ಷಣ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಳ್ಳಬೇಕು. ಶಾಲೆಯ ಹಳೆ ವಿದ್ಯಾರ್ಥಿಗಳು, ಗ್ರಾಮದ ಮುಖಂಡರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು, ಶಾಲೆಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕು. ಈ ಮೂಲಕ ಮಕ್ಕಳ ಕಲಿಕೆಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್ ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದರಾಜು, ಸದಸ್ಯ ಸತೀಶ್, ಮೂರ್ತಿ, ಪ್ರಭುಸ್ವಾಮಿ, ಸುಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗಸುಂದರ್, ಮುಖ್ಯ ಶಿಕ್ಷಕ ವೆಂಕಟಾಚಲ, ಶಿಕ್ಷಕರಾದ ಕೆಂಪಣ್ಣ, ಪುಟ್ಟಲಕ್ಷ್ಮಮ್ಮ, ಮುಖಂಡರಾದ ರುದ್ರಪ್ಪ, ಶಿವಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net