

ಕೋಟ: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಅನನ್ಯವಾದದ್ದು ಎಂದು ಗೀತಾ ಫೌಂಡೇಶನ್ ಪ್ರವರ್ತಕ ಶಂಕರ್ ಐತಾಳ್ ಹೇಳಿದರು.
ಬುಧವಾರ ಹಂಗಾರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ, ಬ್ಯಾಗ್, ಸಮವಸ್ತ್ರ, ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಮ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರವನ್ನು ಹಸ್ತಾಂತರಿಸಿದರು. ಇದೇ ವೇಳೆ ಶಾಲೆಯ ಹಳೇ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿಯಲ್ಲಿ 6ನೇ ರ‌್ಯಾಂಕ್ ಪಡೆದ ವೈಷ್ಣವಿ ಅಲ್ಸೆ ಅವರನ್ನು ಸನ್ಮಾನಿಸಲಾಯಿತು.
ಹಂಗಾರಕಟ್ಟೆ ಕ್ಲಸ್ಟರ್ ಹೆಡ್ ಮಾಲಿನಿ ಶಾಲೆಗೆ ವಿವಿಧ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಐರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಪಂಚಾಯಿತಿ ಸದಸ್ಯ ಶೇಖರ್ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಶಾಲಾ ನಿವೃತ್ತ ಮುಖ್ಯಶಿಕ್ಷಕಿ ಸೇಸು ಟೀಚರ್, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಉಡುಪ, ಚೇತನಾ ಪ್ರೌಢಶಾಲಾ ಮುಖ್ಯಶಿಕ್ಷಕಿ ಕಲ್ಪನಾ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ಶಿಕ್ಷಕಿ ಉಷಾರಾಣಿ ಕಾರ್ಯಕ್ರಮ ನಿರೂಪಿಸಿದರು.