ಸರ್ಕಾರಿ ಶಾಲೆ ಶಿಕ್ಷಕ ಸಾವು

bike accident 1
Published on

ಹುಬ್ಬಳ್ಳಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಛಬ್ಬಿ ಕ್ರಾಸ್ ಬಳಿ ಸೋಮವಾರ ಸಂಭವಿಸಿದೆ.

ಕುಂದಗೋಳ ತಾಲೂಕು ಬು. ತರ್ಲಘಟ್ಟ ಗ್ರಾಮದವರಾದ, ಮಳಲಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತವೀರ ದಾನಮ್ಮನವರ(40) ಮೃತರು. ಕರ್ತವ್ಯಕ್ಕೆ ತೆರಳುವ ವೇಳೆ ಕಂಟೇನರ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net