ಸರ್ಕಾರಿ ಶಾಲೆಗಳು ದೇವಾಲಯ ಇದ್ದಂತೆ

horti 31-1
ಹೊರ್ತಿ ಸಮೀಪದ ಝಳಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಕ್ಕಳನ್ನು ಅದ್ದೂರಿಯಾಗಿ ಬರಮಾಡಿಕೊಳ್ಳುವ ಮೂಲಕ ಶಾಲೆ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷ ಸಣ್ಣಪ್ಪ ತಳವಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಎಸ್.ಜಿ. ನಾಯಿಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಬಿರಾದಾರ ಇತರರಿದ್ದರು.
Published on

ಹೊರ್ತಿ: ಬೇಸಿಗೆ ರಜೆ ಕಳೆದು ಶಾಲೆಗೆ ಆಗಮಿಸುತ್ತಿರುವ ಮಕ್ಕಳಿಗೆ ಅದ್ದೂರಿಯಾಗಿ ಸ್ವಾಗತಿಸುತ್ತಿರುವುದು ಸಂತಸದ ಸಂಗತಿ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಸಣ್ಣಪ್ಪ ತಳವಾರ ಹೇಳಿದರು.

ಸಂಮಿಪದ ಝಳಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಶಾಲೆ ಆರಂಭೋತ್ಸವದಲ್ಲಿ ಮಕ್ಕಳಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳ ಬಡವಿದ್ಯಾರ್ಥಿಗಳ ಪಾಲಿನ ದೇವಾಲಯಗಳಾಗಿವೆ. ಇಂದಿನ ದುಭಾರಿ ಕಾಲದಲ್ಲಿ ಬಡವರು ತಮ್ಮ ಮಕ್ಕಳನ್ನು ಓದಿಸುವುದೇ ಕಷ್ಟವಾಗಿದೆ. ಅಂತದ್ದರಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಸರ್ಕಾರಿ ಶಾಲೆಗಳೂ ಖಾಸಗಿ ಶಾಲೆಗಳನ್ನು ಮೀರಿಸುವಂತಾಗಿವೆ. ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ಓದಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಎಸ್.ಜಿ. ನಾಯಿಕ ಮಾತನಾಡಿ, ದೀರ್ಘ ರಜೆಯ ನಂತರ ಶಾಲೆಗೆ ಆಗಮಿಸುತ್ತಿರುವ ಮಕ್ಕಳು ಶ್ರದ್ಧೆಯಿಂದ ಅಧ್ಯಯನ ನಡೆಸಿ ಗ್ರಾಮದ ಕೀರ್ತಿ ಬೆಳಗಬೇಕು ಎಂದರು.

ಶಾಲೆ ಶಿಕ್ಷಕರು, ಗ್ರಾಪಂ ಸದಸ್ಯರು, ಗ್ರಾಮಸ್ಥರು ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಟಿಗೈದು ಸ್ವಾಗತಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಬಿರಾದಾರ, ಐ.ಎಸ್. ನರೋಳಿ, ಎಸ್.ಕೆ. ಸೊನಕನಳ್ಳಿ, ಎನ್.ಜೆ. ಸಿನಖೇಡ, ಬಾಲಕೃಷ್ಣ ಬಾಲಗಾಂವ, ಎಸ್.ಎಂ. ಕುಲಕರ್ಣಿ, ಎಸ್.ಎಂ. ಪಾಟೀಲ, ನಿಂಬಣ್ಣ ತಳವಾರ, ಮಲಕಾರಿ ಕಾಗರ, ರಾಘವೇಂದ್ರ ಕೆಂಗಾರ, ಸಿದ್ದರಾಮ ಕಾಪಸೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net