ಗ್ರಾಮದ ಸಂಸ್ಕೃತಿ ಬಿಂಬಿಸುವ ಸರ್ಕಾರಿ ಶಾಲೆಗಳು

sri-2 (3)
Published on

ಶೃಂಗೇರಿ: ಒಂದು ಊರಿನ ಸಂಸ್ಕೃತಿಯನ್ನು ಸರ್ಕಾರಿ ಶಾಲೆಗಳು ಪ್ರತಿಬಿಂಬಿಸುತ್ತದೆ. ಮಕ್ಕಳ ಸೃಜನಶೀಲತೆಗೆ ಹೆಚ್ಚಿನ ಮಹತ್ವ ನೀಡುವ ಸರ್ಕಾರಿ ಶಾಲೆಗಳು ಉಳಿಯಬೇಕು. ಇದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುರೇಶ್ ಹೇಳಿದರು.

ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಏರ್ಪಡಿಸಿದ್ದ 16ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ ಪಡೆಯುವುದು ಎಲ್ಲರ ಹಕ್ಕು. ಶಿಕ್ಷಣ ಪಡೆದರೆ ಭವಿಷ್ಯದ ಜೀವನ ಉಜ್ವಲವಾಗುತ್ತದೆ. ಮಧ್ಯಮ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದರೆ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಕೊರತೆ ಇರುವ ಶಿಕ್ಷಕರ ಸ್ಥಾನಕ್ಕೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತಿಥಿ ಶಿಕ್ಷಕರ ಗೌರವಧನವನ್ನು ನೀಡಲಾಗುತ್ತಿದೆ ಎಂದರು.

ಶೃಂಗೇರಿ ಕ್ಷೇತ್ರದ 16 ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರ ನೇಮಕ ಪತ್ರ ನೀಡಲಾಯಿತು. ಉಪನ್ಯಾಸಕ ಡಾ.ಶ್ರೀಮಂದರ, ಜನ ಜಾಗೃತಿ ವೇದಿಕೆ ಕೆಲವಳ್ಳಿ ಕಳಸಪ್ಪ, ಒಕ್ಕೂಟದ ಅಧ್ಯಕ್ಷ ಸಾಗರ ಭಟ್, ಗಿರೀಶ್, ಮಲ್ಲಿಕಾರ್ಜುನ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net