ಸರ್ಕಾರಿ ಸೀಟು ಶ್ರೀಮಂತರಿಗೆ ಹರಾಜು ಸಲ್ಲ

ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಕೈ ಬಿಡುವಂತೆ ಆಗ್ರಹಿಸಿ ಹೊಸಪೇಟೆಯ ತಹಸಿಲ್ ಕಚೇರಿ ಮುಂದೆ ಎಐಡಿಎಸ್‌ಒದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಸಂಚಾಲಕ ಜೆ.ಪಿ.ರವಿಕಿರಣ್, ಪ್ರಮುಖರಾದ ಯು.ಉಮಾದೇವಿ, ಆದಿತ್ಯ, ಗೌತಮ್, ಸುಮಾ ಇತರರಿದ್ದರು.
ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಕೈ ಬಿಡುವಂತೆ ಆಗ್ರಹಿಸಿ ಹೊಸಪೇಟೆಯ ತಹಸಿಲ್ ಕಚೇರಿ ಮುಂದೆ ಎಐಡಿಎಸ್‌ಒದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಸಂಚಾಲಕ ಜೆ.ಪಿ.ರವಿಕಿರಣ್, ಪ್ರಮುಖರಾದ ಯು.ಉಮಾದೇವಿ, ಆದಿತ್ಯ, ಗೌತಮ್, ಸುಮಾ ಇತರರಿದ್ದರು.
Published on

ಹೊಸಪೇಟೆ: ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಕೈ ಬಿಡುವಂತೆ ಆಗ್ರಹಿಸಿ ಎಐಡಿಎಸ್‌ಒದಿಂದ ನಗರದ ತಹಸಿಲ್ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಜೆ.ಪಿ.ರವಿಕಿರಣ್ ಮಾತನಾಡಿ, ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ 25 ಲಕ್ಷ ರೂ. ಶುಲ್ಕದೊಂದಿಗೆ ಶೇ.15 ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿದೆ. ವೈದ್ಯಕೀಯ ಕಾಲೇಜುಗಳಿಗೆ ಹಣ ಹರಿದುಬರಲಿದೆ ಎಂದು ಸರ್ಕಾರ ಹೇಳಿಕೊಂಡಿದ್ದರೂ, ಸರ್ಕಾರಿ ಸೀಟುಗಳನ್ನು ಶ್ರೀಮಂತರಿಗೆ ಹರಾಜು ಹಾಕುವ ಮತ್ತು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣದತ್ತ ತಳ್ಳುವ ಪ್ರಯತ್ನವಾಗುತ್ತಿದೆ ಎಂದು ದೂರಿದರು.

ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣ ಮಂಜೂರು ಮಾಡುವ ಬದಲು, ಸರ್ಕಾರ ವಿದ್ಯಾರ್ಥಿಗಳು ಮತ್ತು ಕುಟುಂಬಗಳ ಮೇಲೆ ಹೊರೆ ಹಾಕುತ್ತಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ 12,447 ಬೋಧಕ ಹುದ್ದೆಗಳನ್ನು ಭರ್ತಿ ಮಾಡಿ ಮೂಲಸೌಕರ್ಯ ಒದಗಿಸಬೇಕು. ಸರ್ಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭ ಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಬದಲು ಬಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲಿ ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net