ಜಾತಿ ಗಣತಿ ಸಮೀಕ್ಷೆ ದೋಷಗಳನ್ನು ಸರ್ಕಾರ ಪರಿಹರಿಸಲಿ

raichur
raichur
Published on

ರಾಯಚೂರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಸಾಕಷ್ಟು ದೋಷಗಳಿದ್ದು, ಸರ್ಕಾರ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಬೇಕೆಂದು ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮೀಕ್ಷೆಗೆ ಕೇವಲ 15 ದಿನಗಳನ್ನು ನಿಗಧಿಪಡಿಸಿದೆ. ಹದಿನೈದು ದಿನಗಳೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಜತೆಗೆ ಸರ್ವರ್ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಇದರಿಂದ ಸಮೀಕ್ಷೆ ಮುಂದೂಡುವ ಸಾಧ್ಯತೆ ಎದುರಾಗುತ್ತದೆ. ರಾಜ್ಯ ಸರ್ಕಾರ ಕ್ರಮ ಬದ್ಧವಾಗಿ ಸಮೀಕ್ಷೆ ನಡೆಸಲು ಮುಂದಾಗಬೇಕು ಎಂದರು.

ಇದೀಗ ಗಣತಿದಾರರು ಸಮೀಕ್ಷೆಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವೊಂದ ಗ್ರಾಮ, ವಾರ್ಡ್‌ಗಳಲ್ಲಿ ಈವರೆಗೂ ಗಣತಿದಾರರು ಹೋಗೆ ಇಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಸರ್ಕಾರ ನೀಡಿರುವ ಮನೆಗಳ ಮಾಹಿತಿಯಾನುಸಾರ ಅಲ್ಲಿಗೆ ಗಣತಿದಾರರು ಹೋದಾಗ ಅಲ್ಲಿ ಮನೆಗಳೇ ಇಲ್ಲ ಎಂಬುವ ಅಂಶವು ಬೆಳಕಿಗೆ ಬಂದಿದೆ ಎಂದರು.

ಮಾದಿಗ ಸಮುದಾಯದವರು, ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂ ನಲ್ಲಿ ಮಾದಿಗ ಎಂದು ಬರೆಸಬೇಕು. ಯಾವುದೇ ಗೊಂದಲಗಳಿಗೆ ಒಳಗಾಗದೇ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ವಿದ್ಯಾರ್ಥಿಗಳು, ವಿದ್ಯಾವಂತ ಯುವಕರು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಮುಖಂಡರಾದ ನರಸಪ್ಪ, ಎನ್. ಮಹಾವೀರ, ರವಿಕುಮಾರ, ರಾಜು.ಎಸ್, ರಾಮು, ರಮೇಶ, ತಿಪ್ಪಣ್ಣ, ಖಾಜಪ್ಪ ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net