ಸರ್ಕಾರ ಲೋಕಾಕ್ಕೆ ಹೆಚ್ಚಿನ ಅಧಿಕಾರ ನೀಡಲಿ

23 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆಗೆ ನೀಡಿರುವ ಅಧಿಕಾರ ವ್ಯಾಪ್ತಿಯಲ್ಲೇ ಕಾರ್ಯ ನಿರ್ವಹಿಸುತ್ತಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್​. ಫಣೀಂದ್ರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಚೇರಿಯಲ್ಲಿ ಯಾವುದೇ ಕರ್ತವ್ಯಲೋಪ ಪ್ರಕರಣಗಳ ಸೇರಿ ಇತರ ಪ್ರಕರಣಗಳ ಕುರಿತು ಸರ್ಕಾರಕ್ಕೆ ವರದಿ ನೀಡಬಹುದೇ ಹೊರತು, ಕ್ರಮಕೈಗೊಳ್ಳಲು ನಮಗೆ ಅಧಿಕಾರವಿಲ್ಲ. ಹೀಗಾಗಿ ಸಂಸ್ಥೆಯಲ್ಲಿ ಈವರೆಗೆ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ. 25ರಷ್ಟಿದೆ. ಸರ್ಕಾರ ಸಂಸ್ಥೆಗೆ ಇನ್ನೂ ಹೆಚ್ಚಿನ ಅಧಿಕಾರ ನೀಡಿದಲ್ಲಿ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಜನರು ಸಂಸ್ಥೆ ಬಗ್ಗೆ ತಿಳಿದುಕೊಳ್ಳಬೇಕು. ವೈಯಕ್ತಿಕ ಪ್ರಕರಣಗಳನ್ನೂ ಲೋಕಾಕ್ಕೆ ದೂರು ನೀಡುತ್ತಾರೆ. ಅವುಗಳನ್ನು ನಾವು ವಿಂಗಡಣನೆ ಮಾಡಿ ನ್ಯಾಯ ನೀಡುವಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಸ್ಥಳಿಯವಾಗಿ ಸಂಸ್ಥೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net