ರೈತರ ಬೆಂಬಲಕ್ಕೆ ನಿಲ್ಲದ ಸರ್ಕಾರ

BC Patil
Published on

ಹಿರೇಕೆರೂರ: ಅತಿವೃಷ್ಟಿಯಿಮದ ಬೆಳೆಗಳಿಗೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಬೆಂಬಲಕ್ಕೆ ನಿಲ್ಲಬೇಕಾದ ಸರ್ಕಾರ ಹಾಗೂ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯೂರಿಯಾ, ಡಿಎಪಿ ಕೊರತೆ ಉಂಟಾಗಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗಳಿಗಷ್ಟೇ ಸೀಮಿತವಾಗಿದ್ದಾರೆ. ರೈತರ ಸಂಕಷ್ಟಕ್ಕೆ ನೆರವಾಗುವ ಕ್ರಮಗಳನ್ನು ಜಿಲ್ಲಾಧಿಕಾರಿ ಕೈಗೊಳ್ಳುತ್ತಿಲ್ಲ ಎಂದರು.

ರೈತರಿಗೆ ರಸಗೊಬ್ಬರ ಸರಿಯಾಗಿ ಸಿಗುತ್ತಿಲ್ಲ. ರಸಬಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಲ್ಲದೆ, ರಸಗೊಬ್ಬರ ಖರೀದಿಗೆ ಲಿಂಕ್ ವ್ಯವಸ್ಥೆ ಬಂದಿದೆ. ಇದು ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ನಕಲಿ ಡಿಎಪಿ ಗೊಬ್ಬರ ಮಾರುಕಟ್ಟೆಗೆ ಬಂದಿದೆ. ಕೃಷಿ ಇಲಾಖೆ ಜಾಗೃತ ದಳ ಕಾರ್ಯನಿರ್ವಹಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಕೊಟ್ಟಿದ್ದು ಬಿಟ್ಟರೆ ರೈತರಿಗೆ ಯಾವ ಭಾಗ್ಯವನ್ನು ನೀಡಿಲ್ಲ. ಬದಲಾಗಿ ರೈತರಿಗೆ ಕಳಪೆ ಬೀಜದ ಭಾಗ್ಯ ಕೊಟ್ಟಿದೆ ಎಂದು ದೂರಿದ ಅವರು, ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಬೆಳೆ ಹಾನಿ ಕುರಿತಾಗಿ ಪರಿಹಾರ ಘೊಷಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net