ವಕ್ಫ್ ಕಾಯ್ದೆಗೆ ತಿದ್ದುಪಡಿಗೆ ವಿರೋಧಿಸಿ ಪ್ರತಿಭಟನೆ

bhr 2 (3)
Published on

ಬಾಳೆಹೊನ್ನೂರು: ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಮುಸ್ಲಿಮರು ಜಾಮೀಯಾ ಮಸೀದಿ ಎದುರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಇ್ತೆಖಾರ್ ಆದಿಲ್ ಮಾತನಾಡಿ, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಲ್ಪಸಂಖ್ಯಾತ ವಿರೋಧಿಯಾಗಿದೆ. ಈ ಕಾಯ್ದೆ ಜಾರಿಯಾದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಳೆಹೊನ್ನೂರಿನ ಸಮಸ್ತ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆ ನಂತರ ಸಾಮೂಹಿಕವಾಗಿ ಪ್ರತಿಭಟನೆ ನಡೆಸಿ ತಿದ್ದುಪಡಿ ಕಾಯ್ದೆ ಜಾರಿಗೊಳಿಸದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಾಮೀಯಾ ಮಸೀದಿ ಸಮಿತಿ ಅಧ್ಯಕ್ಷ ಮಹಮ್ಮದ್ ಇಬ್ರಾಹಿಂ, ಮಹಮ್ಮದ್ ಹನ್ೀ, ಮಹಮ್ಮದ್ ಜುಹೇಬ್, ಜಿ.ಎಂ.ಸಿರಾಜುದ್ದಿನ್, ಮಹಮ್ಮದ್ ಇಲಿಯಾಸ್, ಸಲೀಂ, ಮಹಮ್ಮದ್ ಆಲಿ, ಬಾಷಾ, ಆರ್ೀ, ಮುಸ್ತಾ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net