ಸರ್ಕಾರದ ನಡೆ ಕಾರ್ಯಕರ್ತರ ಕಡೆ 23ಕ್ಕೆ

22sri-2
Published on

ಶೃಂಗೇರಿ: ರಾಜ್ಯಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆಗೆ ಕ್ಷೇತ್ರ ಮಟ್ಟದ ಕಾರ್ಯಕರ್ತರ ಸಮಾವೇಶ 23ರಂದು ಬೆಳಗ್ಗೆ 11ಕ್ಕೆ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಚ್.ನಟರಾಜ್ ಹೇಳಿದರು.

ಶಾರದಾ ನಗರದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖಂಡರಾದ ಡಾ.ಅಂಶುಮಂತ್, ರಮಾನಾಥ ರೈ, ಜಯಪ್ರಕಾಶ ಹೆಗ್ಡೆ, ಶಾಸಕ ಟಿ.ಡಿ.ರಾಜೇಗೌಡ, ಡಾ.ಆರತಿಕೃಷ್ಣ, ಶ್ರೀನಿವಾಸ್, ಸಚಿನ್ ಮೀಗಾ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ಸದಸ್ಯ ಬಾಳೆಮನೆ ನಟರಾಜ್ ಮಾತನಾಡಿ, ಸರ್ಕಾರದ ಎರಡು ವರ್ಷದ ಸಾಧನೆ ಅಗಾಧವಾಗಿದ್ದು, ನಮ್ಮ ಸಾಧನೆ ಮುಂದೆ ವಿರೋಧ ಪಕ್ಷ ಮಾತನಾಡಲು ಅವಕಾಶವಿಲ್ಲದಾಗಿದೆ. ಕಾರ್ಯಕರ್ತರು ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಪ್ರತಿ ಮನೆಗೂ ಆಗುತ್ತಿರುವ ಲಾಭದ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಕೇಂದ್ರ ಸರ್ಕಾರದ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ದರ ಏರಿಕೆ ಮಾಡಿದ್ದಲ್ಲದೇ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅಭಿವೃದ್ಧಿ ಅನುದಾನ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಹೇಳಿದರು. ಮುಖಂಡರಾದ ಕೆಪಿಸಿಸಿ ಸದಸ್ಯ ಸದಾಶಿವ, ಮುಖಂಡರಾದ ಕೆ.ಆರ್.ವೆಂಕಟೇಶ್, ಭಾಸ್ಕರನಾಯ್ಕ, ರಾಜಕುಮಾರ ಹೆಗ್ಡೆ, ನಭೀ, ಎಸ್.ತಿಮ್ಮಪ್ಪ, ಇಂದ್ರಜಿತ್ ಹೆಗ್ಡೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net