

ಬೆಂಗಳೂರು: ಸೂಕ್ಷ್ಮ,ಸಣ್ಣ ಮತ್ತು ಮಧ್ಯಮ (ಎಂಎಸ್ಎಂಇ) ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ರೀತಿಯಲ್ಲಿ ಶಕ್ತಿ ತುಂಬಬೇಕಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ಹಾಗೂ ಪೀಣ್ಯ ಕೈಗಾರಿಕಾ ಸಂಘ( ಪಿಐಎ) ಸಹಯೋಗದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್ಕೆಸಿಸಿಐ) ಗುರುವಾರ ಆಯೋಜಿಸಿದ್ದ "ಇಂಡಿಯಾ ಎಂಎಸ್ಎಂಇ ಕಾನ್ಕ್ಲೇವ್-2025 ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಹಲವು ತೊಂದರೆ ಅನುಭವಿಸುತ್ತಿವೆ. ಇದಕ್ಕೆ ಪರಿಹಾರ ಸಿಗಬೇಕಿದೆ. ಎಂಎಸ್ಎಂಇ ಅಭಿವೃದ್ಧಿಗೆ ನಮ್ಮ ಸರ್ಕಾರ ಆಸಕ್ತಿ ವಹಿಸಿದೆ. ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಿ ಪರಿಹಾರ ನೀಡಲಾಗುವುದು. ದೇಶದಲ್ಲಿ ಇವುಗಳು ಪಾತ್ರ ಪ್ರಮುಖವಾಗಿದ್ದು, ಉದ್ಯೋಗ ಸೇರಿ ವಿವಿಧ ವಿವಿಧ ವಲಯಗಳಲ್ಲಿ ತನ್ನದೇ ಆದ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರು.
ಪೀಣ್ಯ ಸೇರಿ ರಾಜ್ಯದ ಇತರೆ ಭಾಗದ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಶ್ರೀದಲ್ಲೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ಸಚಿವರು ಹೇಳಿದರು.ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್, ಪಿಐಎ ಅಧ್ಯಕ್ಷ ಆರ್. ಶಿವಕುಮಾರ್ ಸೇರಿ ಮತ್ತಿತರರಿದ್ದರು.
ಇಂಡಿಯಾ ಎಂಎಸ್ಎಂಇ ಕಾನ್ಕ್ಲೇವ್ ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಬೇಕಿದೆ. ಕೈಗಾರಿಕೆಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುವಂತಾಗಬೇಕು.
|ಎಂ.ಜಿ.ಬಾಲಕೃಷ್ಣ, ಎಫ್ಕೆಸಿಸಿಐ ಅಧ್ಯಕ್ಷ.