ಎಲ್ಲ ಧರ್ಮಗುರುಗಳ ರಕ್ಷಣೆ ಸರ್ಕಾರದ ಕರ್ತವ್ಯ ; ಕಾರಂಜಿಮಠದ ಸ್ವಾಮೀಜಿ

IMG_20230711_211550.jpg
Published on

ಬೆಳಗಾವಿ : ಧರ್ಮ, ಶಿಕ್ಷಣ ಪ್ರಸಾರ ಮಾಡಿದ್ದ ಸಾತ್ವಿಕ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ನಮಗೆಲ್ಲಾ ನೋವಾಗಿದೆ. ಇದನ್ನು ಒಕ್ಕೊರಲಿನಿಂದ ಖಂಡಿಸುತ್ತೇವೆ. ಯಾವುದೇ ಧರ್ಮದ ಗುರುಗಳ ರಕ್ಷಣೆ ಮಾಡುವುದು ಸರ್ಕಾರ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳನ್ನು ಸಮಗ್ರವಾಗಿ ವಿಚಾರಣೆ ಮಾಡಬೇಕು. ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದೆ ಈ ರೀತಿ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಗಣೇಶಪುರದ ರುದ್ರಕೇಸರಿ ಮಠದ ಹರಿಗುರು ಮಹಾರಾಜ ಮಾತನಾಡಿ, ಸಾಧು, ಸಂತರ ಹತ್ಯೆ ಮಾಡಿ ಜಿಹಾದಿಗಳು ವಿಕೃತಿ ಮೆರೆದರೆ ಹಿಂದೂತ್ವ ನಾಶವಾಗುವುದಿಲ್ಲ. ಎಲ್ಲ ಸಾಧು, ಸಂತರು ಮಠಗಳನ್ನು ಬಿಟ್ಟು ಹಿಂದುತ್ವ ಕಟ್ಟಲು ಹೊರಗಡೆ ಬಂದು ಹೋರಾಟ ನಡೆಯಿಸಬೇಕು. ಬರುವ ದಿನಗಳಲ್ಲಿ ಹಿಂದುಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಹಿಂದುಗಳು ಮನೆಯಲ್ಲಿ ಕುಳಿತುಕೊಂಡರೆ ಹಿಂದು ಧರ್ಮ ಉಳಿಯುವುದಿಲ್ಲ, ನಾವೆಲ್ಲಾ ಜಾಗೃತರಾಗಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುತ್ನಾಳ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಗಣಿಕೊಪ್ಪದ ಗಂಗಾಧರ ಸ್ವಾಮೀಜಿ, ಜಿಲ್ಲಾಧ್ಯಕ್ಷ ಶ್ರೀಕಾಂತ ಕದಂ, ಆನಂದ ಕರಲಿಂಗನವರ, ಪ್ರಮೋದಕುಮಾರ ವಕ್ಕುಂದಮಠ, ವಿನೋದ ದೊಡ್ಡಣ್ಣವರ, ರವಿರಾಜ ಪಾಟೀಲ, ಪ್ರವೀಣ ಕೋಡಾ ಸೇರಿ ಮತ್ತಿತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net