

ಬೆಂಗಳೂರು: ಮೈಕ್ರೋ ಫೈನಾನ್ಸ್(Micro Finance) ಸುಗ್ರೀವಾಜ್ಞೆ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ರಾಜ್ಯ ಸರ್ಕಾರ ಸೋಮವಾರ ಕಡತವನ್ನು ರಾಜ್ಯಪಾಲರ ಅನುಮೋದೆಗಾಗಿ ರವಾನಿಸಿತ್ತು. ಇಂದು (ಬುಧವಾರ, ಫೆಬ್ರವರಿ 12) ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಣೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಣೆಗೆ ಅನುಮೋದನೆ ನೀಡಿದ್ದಾರೆ. ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಇದರಿಂದ ಮೈಕ್ರೋ ಫೈನಾನ್ಸ್ ಕ್ಷೇತ್ರದಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.