ಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

IMG-20211203-WA0005
Published on

ಉಡುಪಿ:  ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಬೆಳಗ್ಗೆ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಅದಮಾರು  ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ರಾಜ್ಯಪಾಲರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ, ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ  ನೀಡಿ  ಗೌರವಿಸಿದರು.

ಭಾವಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವ ಸ್ವಾಗತ ಸಮಿತಿ ಸದಸ್ಯರು ರಾಜ್ಯಪಾಲರನ್ನು ಜನವರಿ 18ರಂದು ನಡೆಯಲಿರುವ ಪರ್ಯಾಯೋತ್ಸವಕ್ಕೆ ಆಹ್ವಾನಿಸಿದರು.

ಕೃಷ್ಣಮಠದಲ್ಲಿ ಬೆಳಗಿನ ಉಪಹಾರ ಸೇವಿಸಿ, ನಂತರ ಕೊಲ್ಲೂರಿಗೆ ತೆರಳಿದರು.

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಪರ್ಯಾಯ  ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net