ರಾಜ್ಯಪಾಲರ ವಿರುದ್ಧ ಅಭಿಯಾನ

24 knk 01
ಕನಕಗಿರಿ ಸಾಂಸ್ಕೃತಿಕ ಭವನಕ್ಕೆ ಸಚಿವ ಶಿವರಾಜ ತಂಗಡಗಿ ಶನಿವಾರ ಭೂಮಿಪೂಜೆ ನೆರವೇರಿಸಿದರು. ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ, ವಕ್ತಾರ ಶರಣಪ್ಪ ಭತ್ತದ್ ಇತರರಿದ್ದರು.
Published on

ಕನಕಗಿರಿ: ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಅಧಿಕಾರವಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಮೂಲಕ ಸಂವಿಧಾನದ ಕಗ್ಗೊಲೆ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದ ಸರ್ಕಿಟ್ ಹೌಸ್ ಹಾಗೂ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಆಣತಿಯಂತೆ ರಾಜ್ಯಪಾಲರು ಕುಣಿಯುತ್ತಿದ್ದು, ಇದು ನಾಚಿಕೆಗೇಡಿನ ಸಂಗತಿ. ರಾಜ್ಯದಲ್ಲಿ 135 ಶಾಸಕರೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ, ಕಪ್ಪು ಚುಕ್ಕೆಯಿಲ್ಲದ ಸಿಎಂ ಸಿದ್ದರಾಮಯ್ಯ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸಕ್ಕೆ ಮುಂದಾಗಿದೆ. ರಾಜ್ಯಪಾಲರು ಕಾಂಗ್ರೆಸ್ ಟಾರ್ಗೆಟ್ ಮಾಡಿ, ತಮ್ಮ ಹುದ್ದೆಗೆ ಕಳಂಕ ತಂದುಕೊಂಡಿದ್ದಾರೆ. ರಾಜ್ಯಪಾಲರು ರಾಜ್ಯ ಬಿಟ್ಟು ತೊಲಗಬೇಕು. ಇಲ್ಲವಾದರೆ ರಾಜ್ಯಪಾಲರ ವಿರುದ್ಧ ಅಭಿಯಾನ ಮಾಡುತ್ತೇವೆ ಎಂದು ತಿಳಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ದೇಶವನ್ನು ಆಳುವುದರ ಜೊತೆಗೆ ಬ್ರಿಟಿಷರನ್ನು ದೇಶದಿಂದ ಓಡಿಸುವ ಕೆಲಸ ಮಾಡಿದೆ. ಬಿಜೆಪಿಯವರು ನಿನ್ನೆ- ಮೊನ್ನೆ ಬಂದು 10 ವಷರ್ದಲ್ಲಿ ದೇಶ ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಯಾವುದೇ ಅಭಿವೃದ್ಧಿ ದೇಶ ಕಂಡಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಲಿಕ್ಕೆ ಬಿಜೆಪಿಯವರಿಗೆ ಯೋಗ್ಯತೆ ಇಲ್ಲ. ಈ ದೇಶಕ್ಕೆ ಬಿಜೆಪಿಯವರ ಕೊಡುಗೆ ಏನು? ದಲಿತರಿಗೆ ಬಿಜೆಪಿಯವರು ಯಾವ ಯೋಜನೆ ನೀಡಿದ್ದಾರೆ? ಎಂದು ಪ್ರಶ್ನಿಸಿದರು.

ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ತಾಲೂಕು ಅಧ್ಯಕ್ಷ ಹಜರತ್ ಹುಸೇನ್, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ಪಪಂ ಸದಸ್ಯರಾದ ರಾಜಾಸಾಬ ನಂದಾಪುರ, ಶರಣೇಗೌಡ, ಸಂಗಪ್ಪ ಸಜ್ಜನ, ಮುಖಂಡ ಸಿದ್ದಪ್ಪ ನಿರ್ಲೂಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net