ರಾಜ್ಯಪಾಲರ ನಡೆ ಸ್ವಾಗತಾರ್ಹ: ಚೆನ್ನಿ

channabasappa
ಎಸ್.ಎನ್.ಚನ್ನಬಸಪ್ಪ, ಶಾಸಕ
Published on

ಶಿವಮೊಗ್ಗ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಹೀಗಾಗಿ ರಾಜ್ಯಪಾಲಕರ ನಡೆ ಸ್ವಾಗತಾರ್ಹವಾಗಿದೆ. ಈ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿಯೇ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿತ್ತು. ಈಗ ನಮ್ಮ ಪಾದಯಾತ್ರೆಗೆ ಗೆಲುವು ಸಿಕ್ಕಂತಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜಕೀಯಕ್ಕಾಗಿ ಪಾದಯಾತ್ರೆ ನಡೆಸಲಿಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದ್ದ ಹಗರಣದಲ್ಲಿ ಸಿಎಂ ಪಾತ್ರವನ್ನು ಜನರ ಮುಂದಿಡುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು. ಆ ನಿಟ್ಟಿನಲ್ಲಿ ರಾಜ್ಯಪಾಲರ ತೀರ್ಮಾನ ಮಹತ್ತರವಾಗಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯಪಾಲರ ನಡೆ ಪ್ರಶ್ನಿಸಿ ಕಾಂಗ್ರೆಸ್‌ನವರು ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಾತ್ಮಕ ಹೋರಾಟ ನಡೆಸಲು ಎಲ್ಲರಿಗೂ ಅವಕಾಶವಿದೆ. ಈಗ ಸಿಎಂ ವಿರುದ್ಧ ಕಾನೂನಾತ್ಮಕ ವಿಚಾರಣೆ ನಡೆಸಬೇಕು ಎಂಬ ರಾಜ್ಯಪಾಲರ ನಿರ್ಧಾರ ಕೂಡಾ ಸಾಂವಿಧಾನಿಕವಾದದ್ದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net