ಕಾಂಗ್ರೆಸ್​ನ ಬಸ್ ಯಾತ್ರೆ ವ್ಯರ್ಥ ಕಸರತ್ತು: ಸಚಿವ ಗೋವಿಂದ ಕಾರಜೋಳ ಗೇಲಿ

Congress Bus Trip
Published on

ಬೆಂಗಳೂರು: ಕಾಂಗ್ರೆಸ್​ನ ಬಸ್ ಯಾತ್ರೆ ವ್ಯರ್ಥ ಕಸರತ್ತು ಅವರು ಇವತ್ತೇ ಬರೆದಿಟ್ಟುಕೊಳ್ಳಲಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 40 ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗೇಲಿ ಮಾಡಿದರು.

ಬೆಳಗಾವಿಯಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಹಿನ್ನೆಲೆಯಲ್ಲಿ ಸಿಎಂ ಅಧಿಕೃತ ನಿವಾಸದಲ್ಲಿ ಸುದ್ದಿಗಾರರಿಗೆ‌ ಪ್ರತಿಕ್ರಿಯಿಸಿದ ಅವರು, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹುಟ್ಟಿ ಬೆಳೆದವರು. ಅಲ್ಲಿಂದ ಬದಾಮಿಗೆ ಬಂದು ಕೊನೆಗೆ ಅಲ್ಲಿ ಸೋಲ್ತೀನಿ ಅಂತಾ ಅಲ್ಲಿಂದ ಪಲಾಯನ ಮಾಡಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಇನ್ನೂ ಅವರ ಕಾರ್ಯಕರ್ತರಿಗೆ ಎಲ್ಲಿದೆ ರಕ್ಷಣೆ? ಎಂದು ಕಾರಜೋಳ ಕೇಳಿದರು.

ಸುಳ್ಳು ಆರೋಪ

ಯಾವುದೇ ದಾಖಲೆಗಳನ್ನು ನೀಡದೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೆಂಪಯ್ಯನ್ನು ಇಟ್ಟುಕೊಂಡು ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಬಹುತೇಕ ಕಾಂಗ್ರೆಸ್ ನಾಯಕರು ಎಲ್ಲರು ಬೇಲ್ ಮೇಲೆ ಓಡಾಡುತ್ತಿದ್ದಾರೆ ಎಂದು ಕಾರಜೋಳ ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net