ಗ್ಯಾರಂಟಿಗಳಿಂದ ಸರ್ಕಾರ ದಿವಾಳಿ: ಈಶ್ವರಪ್ಪ

Ex minister k.s.Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಗ್ಯಾರಂಟಿಗಳಿಂದ ಕರ್ನಾಟಕ ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪಕಿಡಿಕಾರಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿದ್ದ ಎಲ್ಲ ಪ್ರಕರಣಗಳಲ್ಲೂ ಕ್ಲೀನ್‌ಚಿಟ್ ಸಿಕ್ಕಿದೆ. ಇದೀಗ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲೂ ಕ್ಲೀನ್‌ಚಿಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾನೂನು ಜಾರಿ ಸಂಬಂಧ ಕೇಂದ್ರಕ್ಕೆ ಮನವಿ ಮಾಡುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಈ ಸಂಬಂಧ ನಾಳೆಯೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆಯುತ್ತೇನೆ ಎಂದರು.
ಒಬ್ಬೊಬ್ಬ ಕಾಂಗ್ರೆಸ್ ಸಚಿವರೂ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಗುಂಡುಕ್ಕಿ ಕೊಲ್ಲುವ ಕಾನೂನು ಜಾರಿಯಾದರೆ ಮೊದಲು ಆರ್‌ಎಸ್‌ಎಸ್ ಕಚೇರಿ ಬಂದ್ ಮಾಡಬೇಕಿದೆ ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಬೇಸರ ತಂದಿದೆ. ರಾಷ್ಟ್ರವನ್ನು ವಿಭಜನೆ ಮಾಡಬೇಡಿ ಎಂದು ಆರ್‌ಎಸ್‌ಎಸ್ ಹೇಳಿಕೊಟ್ಟಿದೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿರುವುದನ್ನು ಅವರು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net