ಸರ್ಕಾರಿ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ

IMG-20250708-WA0010.jpg
Published on

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2025- 26ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ, ಸಾಂಸತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭ ಮಂಗಳವಾರ ಜರುಗಿತು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಹೆಬ್ಬಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನಪ್ರತಿನಿಧಿಗಳ ನೆರವಿನೊಂದಿಗೆ ಸ್ವಂತ ಕಟ್ಟಡ ಹೊಂದಿರುವ ಕಾಲೇಜಿಗೆ ಮುಂದಿನ ದಿನಗಳಲ್ಲಿ ಪ್ರೌಢಶಾಲೆ ತರಲು ಪ್ರಯತ್ನಿಸೋಣ ಎಂದರು.

ಉಪನ್ಯಾಸಕರಾದ ಬಿ.ಎನ್. ನವಲಗುಂದ, ಜಗದೀಶ ಕಾಶೀಮಠ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಶ್ರೀಶೈಲಯ್ಯ ಬಿ. ಹಿರೇಮಠ ಮಾತನಾಡಿ, ನುರಿತ ಉಪನ್ಯಾಸಕ ವೃಂದ ಇಲ್ಲಿದ್ದು, ಉತ್ತಮ ವಾತಾವರಣ ಸಹ ಇದೆ. ಇದರ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದರು.

ದ್ವೀತಿಯ ಪಿಯು ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ಶಂಕರಣ್ಣ ಚಿಲ್ಲನ್ನವರ ಉಪಸ್ಥಿತರಿದ್ದರು. ಉಪನ್ಯಾಸಕಿ ಭುವನೇಶ್ವರಿ ಕಾಡಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net