ಬರ ಪರಿಹಾರ ನೀಡಲು ಸರ್ಕಾರ ವಿಫಲ: ಆರೋಪ

Published on

ಮೈಸೂರು: ಬರ ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ವಿಳಂಬ ಧೋರಣೆ ಅನುಸರಿಸುತ್ತಿವೆ ಎಂದು ಲೋಕಶಕ್ತಿ ಪಕ್ಷದ ಅಧ್ಯಕ್ಷ ಚಂದ್ರಶೇಖರ ವಿ.ಸ್ಥಾವರಮಠ್ ದೂರಿದರು.
ಅಭಿವೃದ್ಧಿ ವಿಷಯವನ್ನು ಸಂಪೂರ್ಣವಾಗಿ ಮರೆಯಲಾಗಿದೆ. ಅಪೂರ್ಣ ರಾಮಮಂದಿರ ಉದ್ಘಾಟನೆಗೆ ಶಂಕರಾಚಾರ್ಯ ಪೀಠದವರು ವಿರೋಧ ವ್ಯಕ್ತಪಡಿಸಿದ್ದರೂ ಮುಂದುವರಿದಿರುವುದು ಪ್ರಧಾನಿ ನರೇಂದ್ರಮೋದಿ ಅವರ ಧರ್ಮ ವಿರೋಧಿ ನಡೆಯಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು, ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್ ಸಂಘಟನಾ ಕಾರ್ಯದರ್ಶಿ ಶಿವಕುಮಾರಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net