

ಕೊಳವಿ: ಗ್ರಾಮೀಣ ವಿದ್ಯಾರ್ಥಿಗಳು ಪ್ರತಿಭಾವಂತರು. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣ ನೀಡುವ ಕೇಂದ್ರಗಳಾಗಿದ್ದು, ಪಾಲಕರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಲು ಪ್ರೋತ್ಸಾಹಿಸಬೇಕು ಎಂದು ತಹಸೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು.
ಸಮೀಪದ ಮಮದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಹಾಗೂ ಗಂಡು ಮಕ್ಕಳ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪಾಲಕರ ಸಭೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಜತೆಗೆ ಅನೇಕ ಸೌಲಭ್ಯಗಳು ದೊರಕುತ್ತಿದ್ದು, ಸದುಪಯೋಗ ಪಡೆಯಬೇಕು ಎಂದರು.
ಹಳೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಮಂಜುಳಾ ವಗ್ಗನ್ನವರ, ಸದಸ್ಯರಾದ ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ಪಿಡಿಒ ವಿನಾಯಕ ಮಾಳಿ, ಮುಖ್ಯಶಿಕ್ಷಕರಾದ ಎಸ್.ಪಿ. ಥೋರಾತ, ಆರ್.ಬಿ. ಬೆಟಿಗೇರಿ, ರಮೇಶ ಗಾಣಗಿ, ಈರಣ್ಣ ಜನ್ಮಟ್ಟಿ, ಎಂ.ಎನ್. ಗಾಣಗಿ, ಎಸ್.ಜಿ. ಕಮತ, ಮಹೇಶ ಪಾಟೀಲ, ಅಶೋಕ ಗೋಪಾಳಿ, ಮಾಯಪ್ಪ ಪಡಿಮನಿ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.