ದಲಿತರಿಗೆ ರಕ್ಷಣೆ ನೀಡಲು ಸರ್ಕಾರ ಮೀನಾಮೇಷ

HYR JDS protest 14
Published on

ಹಿರಿಯೂರು: ದಲಿತರ ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ, ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಹಿಂದ, ಸಾಮಾಜಿಕ ನ್ಯಾಯದ ಪರ ಎಂದು ಹೇಳುವ ಕಾಂಗ್ರೆಸ್ ಸರ್ಕಾರ ಈ ವಿಷಯದಲ್ಲಿ ಮೌನ ವಹಿಸಿದೆ. ದಲಿತರಿಗೆ ರಕ್ಷಣೆ ನೀಡುವ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ನಗರದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಕಂದಾಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ತಾಲೂಕಾಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಡಿ.ಯಶೋಧರ್, ಎಂ.ರವೀಂದ್ರಪ್ಪ, ಕೆ.ಶಂಕರಮೂರ್ತಿ, ಮಂಜಣ್ಣ, ಶಿವಶಂಕರ್ ಬಸವರಾಜ್, ಕೇಶವಮೂರ್ತಿ, ಶಿವಕುಮಾರ್, ಮದ್ದಿಹಳ್ಳಿ ಹನುಮಂತರಾಯ, ಜಲ್ದಪ್ಪ, ರವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net