ಸರ್ಕಾರಿ ಅಸ್ಪತ್ರೆ ಸಿಬ್ಬಂದಿ ಕೊರತೆ ನೀಗಿಸಲು ಒತ್ತಾಯ

udp-12-yashpal
Published on

ಉಡುಪಿ: ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ವೈದ್ಯಕಿಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಕಳೆದ 6 ತಿಂಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 4 ಮಂದಿ ವೈದ್ಯರು ಸಹಿತ ಕ್ಲೀನಿಂಗ್​ ಮತ್ತು ನರ್ಸಿಂಗ್​ ಸಿಬ್ಬಂದಿಗೆ ಸಂಬಳವಾಗಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಜನರೊಂದಿಗೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಶಾಸಕ ಯಶ್ಪಾಲ್​ ಸುವರ್ಣ ಎಚ್ಚರಿಸಿದ್ದಾರೆ.

ಮಂಗಳವಾರ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಈ ಹಿಂದಿನ ಸರ್ಕಾರ ಹಿಂದೆ ಇದ್ದ ಹಾಜಿ ಅಬ್ದುಲ್ಲಾ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಬೆಡ್​ ಸಾಮರ್ಥ್ಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ಮಂಜೂರು ಮಾಡಿದೆ. ಆದರೆ ಈಗಿನ ಸರ್ಕಾರ ಅದಕ್ಕೆ ಯಾವುದೇ ಅನುದಾನ ಬಿಡುಗಡೆಗೊಳಿಸದೆ ಇರುವುದರಿಂದ ನರ್ಸಿಂಗ್​ ಮತ್ತು ಕ್ಲೀನಿಂಗ್​ ಸಿಬ್ಬಂದಿ ಕೆಲಸ ತೊರೆಯುತ್ತಿದ್ದಾರೆ. ಇದರಿಂದ ಸಿಬ್ಬಂದಿ ಕೊರತೆ ತೀವ್ರವಾಗಿದೆ. 4 ಮಹಡಿ ಕಟ್ಟಡದಲ್ಲಿ 14 ಮಂದಿ ಸ್ವಚ್ಛತಾ ಸಿಬ್ಬಂದಿ ಬದಲಿಗೆ ಕೇವಲ ಒಬ್ಬರು ಕೆಲಸ ಮಾಡುತ್ತಿದ್ದಾರೆ. ಕಟ್ಟಡ ನಿರ್ವಹಣೆಗೂ ಅನುದಾನ ನೀಡುತ್ತಿಲ್ಲ. ರೋಗಿಗಳಿಗೆ ಸಮರ್ಪಕ ಸೇವೆ ನೀಡಲು ಸಾದ್ಯವಾಗುತ್ತಿಲ್ಲ ಎಂದರು.

ಜಿಲ್ಲಾಸ್ಪತ್ರೆಯಲ್ಲಿ 14 ಡಯಾಲಿಸಿಸ್​ ಯಂತ್ರಗಳ ಬದಲಿಗೆ ಕೇವಲ 3 ಯುನಿಟ್​ ಕೆಲಸ ಮಾಡುತ್ತಿದೆ. ಇದರಿಂದ ಬಡ ರೋಗಿಗಳಿಗೆ ತೊಂದರೆಯಾಗುತ್ತಿದೆ. ಬ್ರಹ್ಮಾವರ ತಾಲೂಕು ಅಸ್ಪತ್ರೆಯಲ್ಲಿ ದಾನಿಗಳ ನೆರವಿನಿಂದ ಡಯಾಲಿಸಿಸ್​ ಯಂತ್ರ ನೀಡಲು ತಯಾರಾಗಿದ್ದೇವೆ, ಅದರೆ ಸಿಬ್ಬಂದಿ ನೇಮಕ ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸಲು ಸಂಪೂರ್ಣ ವಿಲವಾಗಿದೆ ಎಂದು ದೂರಿದರು.
ಜಿಲ್ಲಾ ಸರ್ಜನ್​ ಡಾ. ವೀಣಾ, ಮಕ್ಕಳ ತಜ್ಞ ಡಾ. ಸಂದೀಪ್​ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net