

ಮೈಸೂರು: ನವ ಮೈಸೂರಿನ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ರಾಜ್ಯ ಸರ್ಕಾರ ಈ ಬಾರಿ ಆಚರಿಸದ ಹಿನ್ನೆಲೆಯಲ್ಲಿ ಭಾರತೀಯ ಪರಿವರ್ತನಾ ಸಂಘ ಹಾಗೂ ನಾಲ್ವಡಿ ಅಭಿಮಾನಿಗಳ ಒಕ್ಕೂಟದಿಂದ ನಗರದ ಕಲಾಮಂದಿರ ಆವರಣದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಲ್ವಡಿ ಜಯಂತಿ ಆಚರಿಸಲಾಯಿತು.
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಜೂ.4 ರಂದು ನಿಗದಿ ಪಡಿಸಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂ ಡಲಾಯಿತು. ಆದರೆ, ನಂತರ ಜಯಂತಿ ಆಚರಿಸಲು ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವಡಿ ಅಭಿಮಾನಿಗಳು ಒಟ್ಟು ಸೇರಿ ಜಯಂತಿ ಆಚರಿಸುತ್ತಿದ್ದೇವೆ ಎಂದು ಇತಿಹಾಸ ತಜ್ಞ ಪ್ರೊ.ಪಿ.ವಿ. ನಂಜರಾಜ ಅರಸ್ ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಯಮುನಾ, ಕನ್ನಡಪರ ಹೋರಾಟಗಾರ ಅರವಿಂದ್ ಶರ್ಮ ಹಾಗೂ ಇತರರು ಪಾಲ್ಗೊಂಡಿದ್ದರು.