ಸರ್ಕಾರದ ಅಧಿಸೂಚನೆಯಂತೆ ಕೂಲಿ ನೀಡಲಿ

29LNG01
Published on

ಲಿಂಗಸುಗೂರು: ಸರ್ಕಾರದ ಅಧಿಸೂಚನೆ ಪ್ರಕಾರ ಹಮಾಲಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್, ಎಪಿಎಂಸಿ ಹಾಗೂ ಬಜಾರ್ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಹಮಾಲಿ ಕಾರ್ಮಿಕರ ಸಂಘದಿಂದ ಕಾರ್ಮಿಕ ನಿರೀಕ್ಷಕರ ಕಚೇರಿ ಮುಂದೆ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಯಿತು.

ಹಮಾಲಿ ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ಸರ್ಕಾರ ಹಮಾಲಿ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ. ಆದರೆ ಲಿಂಗಸುಗೂರು ಮತ್ತು ಮುದಗಲ್‌ನ ಕೆಲ ಅಂಗಡಿಗಳ ಮಾಲೀಕರು ಸರ್ಕಾರ ನಿಗದಿಪಡಿಸಿದ ಹಮಾಲಿ ದರ ನೀಡುತ್ತಿಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ ಎಂದು ದೂರಿದರು.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೂ.6 ಮತ್ತು ಜು.13 ರಂದು ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಮಿಕ ನಿರೀಕ್ಷಕರು ಮೌನಕ್ಕೆ ಶರಣಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕೂಡಲೇ ಟ್ರೇಡರ್ಸ್ ಮಾಲೀಕರು, ಸಿಮೆಂಟ್ ಮತ್ತು ಹಾರ್ಡವೇರ್ ವ್ಯಾಪಾರಿಗಳ ಸಭೆ ಕರೆದು ಸರ್ಕಾರದ ಅಧಿಸೂಚನೆಯಂತೆ ಹಮಾಲಿ ದರ ಹೆಚ್ಚಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net