ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಲಿ

16 HDLP 01
ಹೂವಿನಹಡಗಲಿ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಬೆಳೆವಿಮೆ ಹಾಗೂ ಸಂರಕ್ಷಣಾ ಪೋರ್ಟಲ್ ಬಗ್ಗೆ ರೈತರಿಗೆ ತರಬೇತಿ ನೀಡಲಾಯಿತು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೊಹಮ್ಮದ್ ಅಶ್ರಪ್, ಸಂಶೋಧಕ ಸಿ.ಎಂ.ಕಾಲಿಬಾವಿ, ಎಒ ವೆಂಕಟೇಶ್ ನಾಯ್ಕ, ರೈತರಾದ ಮಹಾಂತೇಶ್, ಮೆಹಬೂಬ್ ಜಾನ್, ನಾಗರಾಜಪ್ಪ, ಕೊಟ್ರೇಶಪ್ಪ, ಬಸವರಾಜ, ನೀಲಪ್ಪ ಇತರರಿದ್ದರು.
Published on

ಹೂವಿನಹಡಗಲಿ: ತಾಲೂಕಿನ ರೈತರು ಜಮೀನುಗಳಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು ಎಂದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೊಹಮ್ಮದ್ ಅಶ್ರಪ್ ಹೇಳಿದರು.

ತಾಲೂಕಿನ ಮುದೇನೂರು ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಬೆಳೆವಿಮೆ ಹಾಗೂ ಸಂರಕ್ಷಣಾ ಪೋರ್ಟಲ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂಗಾರು ಮಳೆ ಸಮೀಕ್ಷೆಯಲ್ಲಿ ರೈತರು ತಮ್ಮ ಮೊಬೈಲ್‌ಗಳಲ್ಲಿಯೆ ಅಪ್ಲಿಕೇಷನ್ ಬಳಸಿಕೊಂಡು ಬೆಳೆಯ ಬಗ್ಗೆ ಮಾಹಿತಿ ನೀಡಬಹುದು. ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ ಬಳಸಲಾಗುತ್ತದೆ. ರೈತರ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಆ ಯೋಜನೆಗಳನ್ನು ಪಡೆಯಲು ಅರ್ಹ ರೈತರು ಮುಂದಾಗಬೇಕು.

ರಾಸಾಯನಿಕ ರಸಗೊಬ್ಬರಗಳನ್ನು ಬಳಸುವುದನ್ನು ಕಡಿಮೆ ಗೊಳಿಸಿ ಸಾವಯವ ರಸಗೊಬ್ಬರಗಳನ್ನು ಬಳಸಬೇಕು. ಕಾಲ, ಕಾಲಕ್ಕೆ ಬಿತ್ತನೆ ಮಾಡಿ ಆಯಾ ಸಂದರ್ಭದಲ್ಲಿ ಬೆಳೆಗಳಿಗೆ ಬೇಕಾಗುವ ಪೋಷಕಾಂಶಗಳನ್ನು ಪೂರೈಕೆ ಮಾಡಬೇಕು. ಕೃಷಿಯ ಜತೆಗೆ ತೋಟಗಾರಿಕಾ ಬೆಳೆಗಳನ್ನೂ ಬೆಳೆಯಲು ಮುಂದಾಗಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net