ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಳ್ಳಿ

3Anand2
Published on

ಬೆಳಗಾವಿ: ಕೇಂದ್ರ ಸರ್ಕಾರ ರೈತರಿಗಾಗಿ ಸಾಕಷ್ಟು ಯೋಜನೆ ಜಾರಿ ತಂದಿದೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಲೀಡ್​ ಬ್ಯಾಂಕ್​ ವ್ಯವಸ್ಥಾಪಕ ಪ್ರಶಾಂತ ೂಡಕೆ ಹೇಳಿದರು.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಕೆಎಲ್​ಇ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಈಚೆಗೆ ಲೀಡ್​ ಬ್ಯಾಂಕ್​ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್​ ನಂತರದ ವೆಬಿನಾರ್​ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂದೇಶದ ನೇರ ಪ್ರಸಾರದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾಂಕಿನ ೇತ್ರಾಧಿಕಾರಿ ಶರಣಬಸಪ್ಪ, ಕೇಂದ್ರದ ವಿಜ್ಞಾನಿ ಎಸ್​.ಎಂ.ವಾರದ ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಮಂಜುನಾಥ ಪಿ.ಐ., ಬಸವರಾಜ ಅಮ್ಮಿನಬಾವಿ, ಶಂಕರಗೌಡ ಪಾಟೀಲ, ವಿಜ್ಞಾನಿ ಪ್ರವಿಣ ಯಡಹಳ್ಳಿ, ವಿನೋದ ಕೋಚಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net