

ಉಡುಪಿ: ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಅಕ್ಕಮಹಾದೇವಿಯಂಥ ವ್ಯಕ್ತಿಗಳು ರಾತ್ರೋರಾತ್ರಿ ದೊಡ್ಡವರಾಗಿಲ್ಲ. ಪರಿಶ್ರಮದಿಂದಲೇ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿದ್ದಾರೆ. ಅಂಡಬೇಡ್ಕರ್ ಅವರಿಗೆ ಓದುವುದಕ್ಕೂ ಸೂಕ್ತ ಸ್ಥಳವಿರಲಿಲ್ಲ. ಬೀದಿ ದೀಪದ ಕೆಳಗೆ ಕುಳಿತು ಓದಿ, ದೊಡ್ಡ ವ್ಯಕ್ತಿಯಾಗಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ಆನ್ ಲೈನ್ ವ್ಯವಸ್ಥೆ ಇದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸೂಕ್ತವಾಗಿ ಬಳಸಿಕೊಂಡು ಮುಂದೆ ಬರಬೇಕು. ಮಹಾತ್ಮರ ಬದುಕು ನಿಮಗೆಲ್ಲಾ ಆದರ್ಶವಾಗಬೇಕು ಎಂದು ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಹೇಳಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸಿಇಟಿ, ನೀಟ್, ಜೆಇಇ ಆನ್ ಲೈನ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತಕ್ಕೆ 5 ಸಾವಿರ ವರ್ಫಿಗಳ ಇತಿಹಾಸವಿದೆ. ನಮ್ಮ ಹಿಂದಿನ ಮಹಾರಾಜರು ಮಕ್ಕಳಿಗೆ ಗುರುಕುಲಗಳಲ್ಲಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಇದರಿಂದ ಕಷ್ಟ್ಟದ ಜೀವನ ಅರ್ಥ ಮಾಡಿಸುತ್ತಿದ್ದರು ಎಂದು
ಮಕ್ಕಳು ಪಾಲಕರಿಗೆ ಋಣಿಯಾಗಿರಬೇಕು, ಅವರು ಎಷ್ಟೆ ಕಷ್ಟಪಟ್ಟರೂ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸುತ್ತಿದ್ದಾರೆ. ಮಕ್ಕಳಿಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಡುತ್ತಾರೆ. ಉಡುಪಿ ಜಿಲ್ಲಾ ಪಂಚಾಯತಿ ಆರಂಭಿಸಿರುವ ಆನ್ ಲೈನ್ ಸೇವೆಯನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಸಿಇಒ ಎಚ್.ಪ್ರಸನ್ನ, ಪೊಲೀಸ್ ವರಿಫಿ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಉಪ ವಿಭಾಗಧಿಕಾರಿ ರಶ್ಮಿ ಉಪಸ್ಥಿತರಿದ್ದರು.