ಬಸ್ ಹತ್ತುವ ವೇಳೆ ಹೃದಯಾಘಾತ; ಚುನಾವಣಾ ಸಿಬ್ಬಂದಿ ಸಾವು!

WhatsApp Image 2024-05-06 at 11.05.43 AM
Published on

ಬಾಗಲಕೋಟೆ: ಮೇ 07ರಂದು ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್​ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ವರದಿಯಾಗಿದೆ.

ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಹೃದಯಾಘಾತದಿಂದ ಸಾವಿಗೀಡಾದ ಶಿಕ್ಷಕನನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಚುನಾವಣೆಯ ಹಿನ್ನಲೆ ಅವರನ್ನು ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಆಹ್ವಾನಿಸಲಾಗಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net