

ಮಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ವತಿಯಿಂದ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಜಿಲ್ಲೆಯ ಶಾಸಕರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನು ಯಥಾವತ್ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು.
ಎನ್‌ಪಿಎಸ್ ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಎಚ್.ಗಣೇಶ್ ರಾವ್, ಕಾರ್ಯದರ್ಶಿ ಲಿಲ್ಲಿ ಪಾಯ್ಸ, ಗೌರವಾಧ್ಯಕ್ಷ ಉದಯ ಕುಮಾರ್, ಉಪಾಧ್ಯಕ್ಷರಾದ ಸುಧೀರ್ ಉಚ್ಚಿಲ್, ಹರೀಶ್ ಕುಮಾರ್, ವಾಣಿ, ನಿಸಾರ್ ಅಹ್ಮದ್ ಉಪಸ್ಥಿತರಿದ್ದರು.