ಏಪ್ರಿಲ್‌ನಲ್ಲಿ ಗೌಡ ಜನಾಂಗದ ಕ್ರಿಕೆಟ್ ಹಬ್ಬ

MDK07
Published on

ಮಡಿಕೇರಿ: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗ ಬಾಂಧವರ ನಡುವೆ ಕೊಡಗು ಗೌಡ ಯುವ ವೇದಿಕೆ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರಲಾಗುತ್ತಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಹಬ್ಬ ಏಪ್ರಿಲ್ ಕೊನೆಯವಾರ ಹಾಗೂ ಮೇ ಮೊದಲ ವಾರದಲ್ಲಿ ಏರ್ಪಡಿಸುವಂತೆ ತೀರ್ಮಾನಿಸಲಾಗಿದೆ.


ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅಧ್ಯಕ್ಷತೆಯಲ್ಲಿ ವೇದಿಕೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಲಾಗಿದೆ.


ಕಳೆದ ಎರಡು ವರ್ಷಗಳಿಂದ ಯುವ ವೇದಿಕೆ ವತಿಯಿಂದಲೇ ಕುಟುಂಬ ಹೆಸರಿನಲ್ಲಿ ಪಂದ್ಯಾವಳಿ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಕುಟುಂಬ-೨೦೨೩ ಹೆಸರಿನಲ್ಲಿ ಕ್ರಿಕೆಟ್ ಹಬ್ಬ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯೊಂದಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಕೂಡ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.


ಸಭೆಯಲ್ಲಿ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಕಟ್ಟೆಮನೆ ರೋಶನ್, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಶಿಸ್ತು ಸಮಿತಿ ಅಧ್ಯಕ್ಷ ಪೊಕ್ಕುಳಂಡ್ರ ಮನೋಜ್, ಕ್ರಿಯಾ ಸಮಿತಿಯ ಪುದಿಯನೆರವನ ರಿಶಿತ್, ನಿರ್ದೇಶಕರುಗಳಾದ ಮೂಲೆಮಜಲು ಮನೋಜ್, ದಂಬೆಕೋಡಿ ಗಯಾ, ಕೋಚನ ಅನೂಪ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net