ಗೌರಮ್ಮ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೂಡಕಂಡಿ ಓಂಶ್ರೀ ದಯಾನಂದ

gowrama
Published on

ಮಡಿಕೇರಿ:

ಜ 15. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಈ ಬಾರಿ ಕೂಡಕಂಡಿ ಓಂಶ್ರೀ ದಯಾನಂದ ಅವರ ಪುಟಾಣಿ ರೈಲು - ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ ಕಥಾ ಸಂಕಲನ ಆಯ್ಕೆ ಆಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆಗಾರ್ತಿ ಕೊಡಗಿನ ಗೌರಮ್ಮ ಅವರ ಪುತ್ರ ಬಿ.ಜಿ. ವಸಂತ ಅವರು ಕೊಡಗಿನ ಮಹಿಳಾ ಲೇಖಕರ ಪ್ರಕಟಿತÀ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿದ್ದಾರೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ 15 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು. ಈ ಪೈಕಿ ಕೂಡಕಂಡಿ ಓಂಶ್ರೀ ದಯಾನಂದ ಅವರ ಪುಟಾಣಿ ರೈಲು - ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ ಕಥಾ ಸಂಕಲನವನ್ನು ತೀರ್ಪುಗಾರರು ಆಯ್ಕೆ ಮಾಡಿದ್ದಾರೆ.

ಕೂಡಕಂಡಿ ಓಂಶ್ರೀ ದಯಾನಂದ ಭಾಗಮಂಡಲ ತಾವೂರು ಗ್ರಾಮದ ಅಮೆ ಮಾದಪ್ಪ ಮತ್ತು ವನಜ ದಂಪತಿ ಪುತ್ರಿ. ವಿರಾಜಪೇಟೆಯ ಸÀರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಕೂಡಕಂಡಿ ದಯಾನಂದ ಅವರ ಪತ್ನಿ.

ಗೃಹಿಣಿಯಾಗಿರುವ ಓಂಶ್ರೀ ದಯಾನಂದ ಕಥೆ, ಕವನ ಮತ್ತು ಲೇಖನಗಳನ್ನು ಬರೆಯುತ್ತಾರೆ. ಹಲವಾರು ಕಥೆ, ಕವನ, ಮಕ್ಕಳ ಕಥೆ ಮತ್ತು ಲೇಖನಗಳನ್ನು ಕನ್ನಡ ಮತ್ತು ಅರೆಭಾಷೆಯಲ್ಲಿ ಪ್ರಕಟಿಸಿದ್ದಾರೆ. ವಿವಿಧ ಕಥಾ ಸ್ಪರ್ಧೆಗಳಲ್ಲಿ ಬಹುಮಾನಗಳನ್ನೂ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net