ಮಾ. 7ಕ್ಕೆ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ

gowramma
Published on

ಮಡಿಕೇರಿ:

2024-25 ನೇ ಸಾಲಿನ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಸಣ್ಣಕತೆಗಳ ಗೌರಮ್ಮ ದತ್ತಿ ನಿಧಿ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಮೂರ್ನಾಡಿನ ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಮಾ. 7ರಂದು ನಡೆಯಲಿದೆ.

ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ ಉದ್ಘಾಟಿಸುವರು. ಈ ಬಾರಿಯ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ವಿಜೇತರಾದ ಕೂಡಕಂಡಿ ಓಂ ಶ್ರೀ ದಯಾನಂದ ಅವರಿಗೆ ಸಾಹಿತಿ ಎಚ್. ನಿವೇದಿತಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಕೆ.ಸಿ. ವೆಂಕಪ್ಪ, ಮುಖ್ಯೋಪಾಧ್ಯಾಯಿನಿ ಬಿ.ಎನ್. ಪುಷ್ಪಾವತಿ, ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಮತ್ತಿತರರು ಭಾಗವಹಿಸುವರು ಎಂದು ಕಸಾಪ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net