ಜಾತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿ

30 jlr
Published on

ಜಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಮೇ 5 ರಿಂದ 17ರವರೆಗೆ ನಡೆಯುವ ಜಾತಿ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಗೌರಿಪುರ ಕುಬೇರಪ್ಪ ಹೇಳಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಒಳ ಮೀಸಲಾತಿ ಸಮೀಕ್ಷೆ ಹಿನ್ನೆಲೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಮನೆಗೆ ಗಣತಿಗೆ ಬಂದಾಗ ಕಾಲಂ ನಂ. 61ರಲ್ಲಿ ಮಾದಿಗ ಎಂದು ಬರೆಸಬೇಕು ಎಂದರು.

ಹೋರಾಟ ಸಮಿತಿಯಿಂದ ತಾಲೂಕಿನ ಪ್ರತಿ ಹಳ್ಳಿಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುವುದು. ಗ್ರಾಮದಲ್ಲಿ ವಿದ್ಯಾವಂತರನ್ನು ಗುರುತಿಸಿ ಅವರ ಮೂಲಕವು ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಖಂಡ ಚದರಗೋಳ ಆನಂದ್ ಮಾತನಾಡಿದರು. ಸಮಿತಿ ತಾಲೂಕಾಧ್ಯಕ್ಷ ಕ್ಯಾಸೇನಹಳ್ಳಿ ಹನುಮಂತಪ್ಪ, ಕಾರ್ಯದರ್ಶಿ ಮಂಜುನಾಥ್ ಕಸವ್ವನಹಳ್ಳಿ, ಉಪಾಧ್ಯಕ್ಷ ತೋರಣಗಟ್ಟೆ ತಿಪ್ಪೇಸ್ವಾಮಿ, ನಿವೃತ್ತ ಶಿಕ್ಷಕ ಶಿವಣ್ಣ, ಎ.ಕೆ. ಯಲ್ಲಪ್ಪ, ಮುಖಂಡರಾದ ಸೂರಡ್ಡಿಹಳ್ಳಿ ರಂಗಸ್ವಾಮಿ, ಹರೀಶ್ ಹನುಮಂತಾಪರು, ಕಮಂಡಲಗೊಂದಿ ಹೊನ್ನೂರಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net